ರೈತ ಸ್ನೇಹಿ ಬಜೆಟ್ ಮಂಡನೆ ಮಾಡಲಾಗಿದ್ದು, ನನ್ನ ಹೆಸರು ಕೆಡಿಸಲು ಬಿಜೆಪಿ ಷಡ್ಯಂತ್ರ: ಸಿಎಂ

ರೈತ ಸ್ನೇಹಿ ಬಜೆಟ್ ಕುರಿತು ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ...
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Updated on: 
ಬೆಂಗಳೂರು: ರೈತ ಸ್ನೇಹಿ ಬಜೆಟ್ ಕುರಿತು ಮಾಧ್ಯಮಗಳು ಹಾಗೂ ವಿರೋಧ ಪಕ್ಷಗಳು ಸುಳ್ಳು ಸುದ್ದಿಗಳನ್ನು ಹಬ್ಬಿಸುತ್ತಿವೆ ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ. 
ಶನಿವಾರ ಸುದ್ದಿಗಾರರ ಜೊತೆ ಮಾತನಾಡಿ ಅವರು, ಬಜೆಟ್ ನಲ್ಲಿ ಘೋಷಣೆ ಮಾಡಿರುವ ಸಾಲ ಮನ್ನಾ ವಿಚಾರವಾಗಿ ಸತ್ಯಕ್ಕೆ ದೂರವಾದ ಟೀಕೆಗಳನ್ನು ಮಾಡಲಾಗುತ್ತಿದೆ. ನಾನು ಯಾವುದೇ ಒಂದು ಜಾತಿಗೆ ಮುಖ್ಯಮಂತ್ರಿಯಲ್ಲ. ಬದಲಿಗೆ ನಾನು ಅನ್ನದಾತರ ಪರವಾಗಿರುವ ಮುಖ್ಯಮಂತ್ರಿ ಎಂದು ಹೇಳಿದ್ದಾರೆ. 
ಸಾಲ ಮನ್ನಾದಿಂದ ಒಕ್ಕಲಿಗ ಸಮುದಾಯಕ್ಕೆ ಹೆಚ್ಚು ಉಪಯೋಗವಾಗಲಿದೆ ಎಂದು ಪ್ರತಿಪಕ್ಷ ಬಿಜೆಪಿ, ಮಾಧ್ಯಮಗಳು ಸುಳ್ಳು ಸುದ್ದಿಯನ್ನು ಹಬ್ಬಿಸುತ್ತಿದೆ. ರಾಜ್ಯದ ಜನತೆ ಪರ ಕೆಲಸ ಮಾಡುತ್ತಿರುವುದರಿಂದ ತಮ್ಮ ಹೆಸರನ್ನು ಕೆಡಿಸಲು ಬಿಜೆಪಿ ಷಡ್ಯಂತ್ರ ರೂಪಿಸುತ್ತಿದೆ. ಒಂದು ವೇಳೆ ಬಿಜೆಪಿಯವರು ತಮ್ಮ ಹೆಸರು ಕೆಡಿಸಬೇಕು ಎಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ. 
ಬಜೆಟ್ ವಿರುದ್ಧ ಟೀಕೆಗಳು ವ್ಯಕ್ತವಾಗುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಟೀಕೆ ಮಾಡುತ್ತಿರುವವರು ಬಜೆಟ್'ನ್ನು ಸಂಪೂರ್ಣವಾಗಿ ಅರ್ಥ ಮಾಡಿಕೊಂಡಿಲ್ಲ. ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಏರಿಕೆಯೊಂದನ್ನೇ ಗಮನಕ್ಕೆ ತೆಗೆದುಕೊಂಡು ಚರ್ಚೆಗಳನ್ನು ಮಾಡುತ್ತಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ರೂ.9 ರಿಂದ 19-20ವರೆಗೂ ಹೆಚ್ಚಳ ಮಾಡಿದೆ. ಆಗ ಎಲ್ಲಿದ್ದರೂ ಈ ಟೀಕಾಕಾರರು? ಎಂದು ಪ್ರಶ್ನಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com