ಉತ್ತರ ಕರ್ನಾಟಕ ನಿರ್ಲಕ್ಷಿಸಿದರೆ ಪ್ರತ್ಯೇಕ ರಾಜ್ಯ ಹೋರಾಟಕ್ಕೆ ಬೆಂಬಲ: ಶ್ರೀರಾಮುಲು

ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದರೆ ನಾವು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ ನೀಡುತ್ತೇವೆ...
ಶ್ರೀರಾಮುಲು
ಶ್ರೀರಾಮುಲು
ಬೆಂಗಳೂರು: ಉತ್ತರ ಕರ್ನಾಟಕವನ್ನು ನಿರ್ಲಕ್ಷ್ಯ ಮಾಡಿದರೆ ನಾವು ಪ್ರತ್ಯೇಕ ರಾಜ್ಯದ ಹೋರಾಟಕ್ಕೆ ಬೆಂಬಲ ನೀಡುತ್ತೇವೆ ಎಂದು ಬಿಜೆಪಿ ಶಾಸಕ ಬಿ ಶ್ರೀರಾಮುಲು ಅವರು ಬುಧವಾರ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ಇಂದು ವಿಧಾನಸಭೆಯಲ್ಲಿ ಬಜೆಟ್​ ಮೇಲಿನ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಶ್ರೀರಾಮುಲು ಅವರು,  ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯ ರಚನೆಗೆ ನಮ್ಮ ಬೆಂಬಲವಿದೆ. ಬಜೆಟ್​ನಲ್ಲಿ ಉತ್ತರ ಕರ್ನಾಟಕಕ್ಕೆ ನಿರ್ಲಕ್ಷ್ಯ ಮಾಡಿದ ಹಿನ್ನೆಲೆಯಲ್ಲಿ ನಾವು ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಬೆಂಬಲಿಸುತ್ತೇವೆ ಎಂದರು.
ಜೆಡಿಎಸ್​ ತಾನು ಪರಾಭವಗೊಂಡಿರುವ ಕ್ಷೇತ್ರಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ. ಆ ಕ್ಷೇತ್ರಗಳಿಗೆ ಸಮರ್ಪಕ ಯೋಜನೆ, ಅನುದಾನ ನೀಡದೆ ಉತ್ತರ ಕರ್ನಾಟಕವನ್ನು ನಿರ್ಲಕ್ಷಿಸಿದೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಧೋರಣೆಯಿಂದ ಬೇಸತ್ತು ನಾವು ಪ್ರತ್ಯೇಕ ರಾಜ್ಯದ ಹೋರಾಟವನ್ನು ಬೆಂಬಲಿಸುವ ಪರಿಸ್ಥಿತಿ ಬಂದಿದೆ ಎಂದು ರಾಮುಲು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com