ಇಂದು ದಿನೇಶ್ ಗುಂಡೂರಾವ್ ಪದಗ್ರಹಣ: ಹೂವಿನ ಹಾಸಿಗೆಯಲ್ಲ ಕೆಪಿಸಿಸಿ ಅಧ್ಯಕ್ಷ ಸ್ಥಾನ!

ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ...
ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್
ಬೆಂಗಳೂರು: ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಇಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ, ಸಮ್ಮಿಶ್ರ ಸರ್ಕಾರದ ಸಂಪುಟದಲ್ಲಿ ಸ್ಥಾನ ಸಿಗದ ಅತೃಪ್ತರ ದೊಡ್ಡ ದಂಡೇ ಇರುವುದು ದಿನೇಶ್ ಗುಂಡೂರಾವ್ ಅವರಿಗೆ ಸವಾಲಿನ ವಿಷಯವಾಗಿದೆ.
2019ರಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು,ದಿನೇಶ್ ತಂಡ ಅದಕ್ಕೂ ಸಿದ್ದವಾಗಬೇಕಿದೆ. ಇದೇ ಮೊದಲ ಬಾರಿಗೆ ರಾಜ್ಯದ 28 ಲೋಕಸಭೆ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ದಿಸುತ್ತಿಲ್ಲ, ಕೇವಲ 18 ಕ್ಷೇತ್ರಗಳಲ್ಲಿ ಸ್ಪರ್ದಿಸುತ್ತಿರುವ ಕಾಂಗ್ರೆಸ್ ಉಳಿದ 10 ಕ್ಷೇತ್ರಗಳನ್ನು ಸಮ್ಮಿಶ್ರ ಪಾಲಪಾದರ ಜೆಡಿಎಸ್ ಗೆ ಬಿಟ್ಟುಕೊಡಲಿದೆ.
ಪದಗ್ರಹಣದ ನಂತರದ ಮೊದಲ ಕೆಲಸವೇ ಲೋಕಸಭೆ ಚುನಾವಣೆಯತ್ತ ಗಮನ ಹರಿಸುವುದಾಗಿದೆ, ನಮಗೆ ನಂಬಿಕೆಯಿದೆ, ನಾವು ಪಕ್ಷದ ನಿರೀಕ್ಷೆಯನ್ನು ಲೋಕಸಭೆ ಚುನಾವಣೆಯಲ್ಲಿ ಪೂರ್ಣಗೊಳಿಸುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ವೆಣುಗೋಪಾಲ್ ಹೇಳಿದ್ದಾರೆ.
2018ರ ವಿಧಾನ ಸಭೆ ಚುನಾವಣೆಗಾಗಿ ಪರಮೇಶ್ವರ್ ಮತ್ತು ವೇಣುಗೋಪಾಲ್ ಪಕ್ಷವನ್ನು ತಳಮಟ್ಟದಿಂದ ಸಂಘಟಿಸಿಗದ್ದರು, ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿಸಲು ಹೆಚ್ಚಿನ ಆದ್ಯತೆ ನೀಡಿದ್ದರು. ಇದಕ್ಕಾಗಿ ಅವರು ಯುವ ನಾಯಕರನ್ನು ಬಳಸಿಕೊಂಡಿದ್ದರು. ಹೀಗಿದ್ದರೂ ಚುನಾವಣೆಯಲ್ಲಿ ಪೂರ್ಣ ಪ್ರಮಾಣದ ಬಹುಮತ ಪಡೆಯಲು ಸಾಧ್ಯವಾಗಲಿಲ್ಲ, ಆದರೆ 2013 ರಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಪಕ್ಷ ಅಧಿಕಾರ ಹಿಡಿಯಿತು ತಮಿಳುನಾಡು, ಬಿಹಾರ, ಉತ್ತರ ಪ್ರದೇಶ ಮತ್ತಿತರ ರಾಜ್ಯಗಳಲ್ಲಿ ಕಾಂಗ್ರೆಸ್ ಪ್ರಭಾವ ಕುಸಿಯಿತು.
ಸ್ಪರ್ಧಿಸಿದ್ದ ರಾಜ್ಯಗಳಲ್ಲಿ ಕಾಂಗ್ರೆಸ್ ಸ್ವಂತ ಬಲದ ಮೇಲೆ ಅಧಿಕಾರ ಹಿಡಿಯಲು ಸಾಧ್ಯವಾಗಲೇ ಇಲ್ಲ, ಕರ್ನಾಟಕ ಕಾಂಗ್ರೆಸ್ ಗೆ ಇದು ನಿರ್ಣಾಯಕವಾಗಲಿದೆ,  ಬಿಜೆಪಿಯನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಕಾಂಗ್ರೆಸ್ ಜೆಡಿಎಸ್ ಜೊತೆ ಕೈ ಜೋಡಿಸಿದೆ, ಬೇರೆ ರಾಜ್ಯಗಳಲ್ಲಿ ಇದು ಪುನಾರಾವರ್ತೆನೆಯಾಗದಿರುವುದು ಅದೃಷ್ಟ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com