ಅನ್ನ ಭಾಗ್ಯ ಅಕ್ಕಿ ಕಡಿತ, ಏರಿದ ಇಂಧನ ದರ: ಸಿಎಂ ವಿರುದ್ಧ ಸಿದ್ದರಾಮಯ್ಯ ಪತ್ರ ಸಮರ!

ಅನ್ನಭಾಗ್ಯ ಅಕ್ಕಿಯ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸಿರುವುದು ನನಗೆ ನಿಜಕ್ಕೂ ಅಚ್ಚರಿ ತಂದಿದೆ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ...
ಸಿದ್ದರಾಮಯ್ಯ ಮತ್ತು ಕುಮಾರ ಸ್ವಾಮಿ
ಸಿದ್ದರಾಮಯ್ಯ ಮತ್ತು ಕುಮಾರ ಸ್ವಾಮಿ
ಬೆಂಗಳೂರು: ಅನ್ನಭಾಗ್ಯ ಅಕ್ಕಿಯ ಪ್ರಮಾಣವನ್ನು 7 ಕೆಜಿಯಿಂದ 5 ಕೆಜಿಗೆ ಇಳಿಸಿರುವುದು ನನಗೆ ನಿಜಕ್ಕೂ ಅಚ್ಚರಿ ತಂದಿದೆ ಎಂದು ಮುಖ್ಯಮಂತ್ರಿ ಕುಮಾರ ಸ್ವಾಮಿ ಅವರಿಗೆ ಮಾಜಿ ಸಿಎಂ ಹಾಗೂ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. 
ಅನ್ನಭಾಗ್ಯ ಅಕ್ಕಿಯ ಕಡಿತ ಹಾಗೂ ಇಂಧನ ದರಗಳ ಎರಿಕೆಯನ್ನು ಸಮರ್ಥಿಸಿಕೊಂಡಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈಗ ಯೂ ಟರ್ನ್‌ ಮಾಡಿದ್ದಾರೆ. ಬಜೆಟ್‌ನಲ್ಲಿನ ಈ ನಿರ್ಧಾರಗಳ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದ ಎಲ್ಲರ ಹುಬ್ಬೇರುವಂತೆ ಮಾಡಿದೆ.
ಸರ್ಕಾರದ ವಿರುದ್ಧ ಪತ್ರ ಸಮರ ನಡೆಸುತ್ತಿರುವ ಸಿದ್ದರಾಮಯ್ಯ, ತಮ್ಮ ಅವಧಿಯಲ್ಲಿ ತೆಗೆದುಕೊಂಡ ಅನ್ನಭಾಗ್ಯ ಯೋಜನೆಯಲ್ಲಿ ಮಾರ್ಪಾಟು ಮಾಡಿರುವ ನಿರ್ಧಾರವನ್ನು ಖಂಡಿಸಿದ್ದಾರೆ. ಅಲ್ಲದೆ ಪತ್ರದಲ್ಲಿ ಯೋಜನೆಯ ಜತೆಗೆ ಭಾವಾತ್ಮಕ ಸಂಬಂಧಗಳೂ ಇವೆ. ಜಾತಿ ಭೇದಗಳನ್ನು ಮರೆತ ಯೋಜನೆ ಇದಾಗಿದೆ ಎಂದು ತೀಕ್ಷ್ಣ ಪದಗಳಲ್ಲಿ ಹೇಳಿದ್ದಾರೆ. 
ಪೆಟ್ರೋಲ್‌ ಹಾಗೂ ಡೀಸಲ್‌ ಬೆಲೆ ಏರಿಕೆ ಸಂಬಂಧ ಕಾಂಗ್ರೆಸ್‌ ಪಕ್ಷ ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸುತ್ತಿದೆ. ಬಿಜೆಪಿ ಸರಕಾರದ ವಿರುದ್ಧ ಇದೇ ವಿಚಾರದಲ್ಲಿ ಪ್ರತಿಭಟನೆಯನ್ನೂ ನಡೆಸುತ್ತಿದೆ. ಇಂತಹ ಸನ್ನಿವೇಶದಲ್ಲಿ ತೈಲ ಬೆಲೆ ಏರಿಕೆ ಮಾಡಿರುವ ನಿರ್ಧಾರ ಸಮಂಜಸವಲ್ಲ. ಇದರಿಂದ ಜನಸಾಮಾನ್ಯರ ಮೇಲೆ ತೀವ್ರ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ. ಕೂಡಲೇ ಈ ಬಗ್ಗೆ ಮರು ಪರಿಶೀಲಿಸುವಂತೆ ಅವರು ಪತ್ರದಲ್ಲಿ ಆಗ್ರಹಿಸಿದ್ದಾರೆ.  
ಸಮನ್ವಯ ಸಮಿತಿ ಸಭೆಯಲ್ಲಿ ಅನ್ನ ಭಾಗ್ಯ ಅಕ್ಕಿ ಕಡಿತ ಮತ್ತು ಇಂಧನ ಬೆಲೆ ಏರಿಕೆ ಬಗ್ಗೆ ಕುಮಾರ ಸ್ವಾಮಿ ಪ್ರಸ್ತಾಪಿಸಿರಲಿಲ್ಲ ಎಂದು ಸಿದ್ದರಾಮಯ್ಯ ಅವರ ಆಪ್ತ ಮೂಲಗಳು ತಿಳಿಸಿವೆ. ಈ ಎರಡು ಕಾರಣ ಸಮ್ಮಿಶ್ರ ಸರ್ಕಾರದಲ್ಲಿ ಮತ್ತಷ್ಟು ಹಗ್ಗಜಗ್ಗಾಟಕ್ಕೆ ಕಾರಣವಾಗಿದೆ, 
ಹಿಂದಿನ ಸರ್ಕಾರದ ಅನ್ನಭಾಗ್ಯ ಸೇರಿದಂತೆ ಹಲವು ಜನಪ್ರಿಯ ಯೋಜನೆಗಳನ್ನು ಮುಂದುವರಿಸಿಕೊಂಡು ಹೋಗುವುದಾಗಿ ಕುಮಾರಸ್ವಾಮಿ ಭರವಸೆ ನೀಡಿದ್ದರು. ಆದರೆತೆರಿಗೆ ಏರಿಕೆ ಬಗ್ಗೆ ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಮಾಹಿತಿ ನೀಡಿರಲಿಲ್ಲ, ಈ ಸಂಬಂದ ಸಿದ್ದರಾಮಯಮಯ ಸಾರ್ವಜನಿಕವಾಗಿ ಅಸಮಾಧಾನ ವ್ಯಕ್ತ ಪಡಿಸಿರುವುದು ಸಮ್ಮಿಶ್ರ ಸರ್ಕಾರದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದನ್ನು ತೋರ್ಪಡಿಸುತ್ತಿದೆ, ತಮ್ಮದೇ ಪಕ್ಷದ ಪರಮೇಶ್ವರ್ ಸಮ್ಮಿಶ್ರ ಸರ್ಕಾರದಲ್ಲಿ ಕೆಲಸ ಮಾಡುತ್ತಿದ್ದಾರೆ, ಆದರೆ ಸಿದ್ದರಾಮಯ್ಯ ತಮ್ಮನ್ನು ತಾವು ಸರ್ಕಾರದ ವಿರೋಧಿ ಎಂಬಂತೆ ಬಿಂಬಿಸಿಕೊಳ್ಳುತ್ತಿರುವುದು ಹಲವು ಸಂಶಯಗಳಿಗೆ ಎಡೆ ಮಾಡಿಕೊಟ್ಟಿದೆ. ಜೊತೆಗೆ ಎರಡು ಪಕ್ಷಗಳ ನಿಲುವು ಬೇರೆ ಬೇರೆ ಎಂಬುದನ್ನು ತಿಳಿಸುತ್ತದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಟ್ಟಿದ್ದಾರೆ.
ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಕೆ ವಿರುದ್ಧ ಕಾಂಗ್ರೆಸ್‌ ಪಕ್ಷ ರಾಷ್ಟ್ರ ಮಟ್ಟದಲ್ಲಿ ಹೋರಾಟ ನಡೆಸುತ್ತಿದೆ. ತೈಲ ಬೆಲೆ ಏರಿಕೆಯನ್ನು ಪ್ರಮುಖ ವಿಷಯವನ್ನಾಗಿ ಮಾಡಿಕೊಂಡು ನಮ್ಮ ಪಕ್ಷ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಹೋರಾಟ ನಡೆಸಿತು. ಜತೆಗೆ ನಮ್ಮ ಪಕ್ಷದ ರಾಷ್ಟ್ರೀಯ ನಾಯಕರೂ ಸಹ  ಈ ವಿಷಯದಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸುತ್ತಿದ್ದಾರೆ.
ಇಂತಹ ಸನ್ನಿವೇಶದಲ್ಲಿ ಪೆಟ್ರೋಲ್‌ ಮತ್ತು ಡೀಸೆಲ್‌ ದರ ಏರಿಸುವ ನಿರ್ಧಾರವನ್ನು ತಾವು ಘೋಷಣೆ ಮಾಡಿದ್ದೀರಿ. ಇದರಿಂದ ಬೆಲೆ ಏರಿಕೆ ಜೊತೆಗೆ ಜನಸಾಮಾನ್ಯರ ಮೇಲೂ ಪರಿಣಾಮ ಬೀರಲಿದೆ. ಹೀಗಾಗಿ, ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಸುವ ತೀರ್ಮಾನದ ಬಗ್ಗೆಯೂ ಮರು ಪರಿಶೀಲನೆ ಮಾಡಬೇಕೆಂದು ಕೋರುತ್ತೇನೆ ಎಂದು ಸಿದ್ದರಾಮಯ್ಯ ಪತ್ರದಲ್ಲಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com