ಸಮ್ಮಿಶ್ರ ಸರ್ಕಾರದಲ್ಲಿ ಕುಮಾರಸ್ವಾಮಿ ಮೇಲೆ ಒತ್ತಡ ಹೆಚ್ಚಿದೆ- ಎಚ್. ಡಿ. ದೇವೇಗೌಡ

ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಮೇಲೆ ಹೆಚ್ಚಿನ ಒತ್ತಡ ಇರುವುದಾಗಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ.
ಎಚ್. ಡಿ. ದೇವೇಗೌಡ
ಎಚ್. ಡಿ. ದೇವೇಗೌಡ

ಹುಬ್ಬಳ್ಳಿ: ಜೆಡಿಎಸ್- ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ ಹೆಚ್. ಡಿ. ಕುಮಾರಸ್ವಾಮಿ ಅವರ ಮೇಲೆ  ಹೆಚ್ಚಿನ ಒತ್ತಡ ಇರುವುದಾಗಿ ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಹೇಳಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು,  ಉತ್ತರ ಕರ್ನಾಟಕಕ್ಕೆ ನೀಡಿರುವ ಅನುದಾನದ ಬಗ್ಗೆ ವಿಧಾನಸಭೆಯಲ್ಲಿ ಚರ್ಚೆಯಾಗಬೇಕು. 1956ರಿಂದ ಇಂದಿನವರೆಗೂ ಯಾವ ಭಾಗಕ್ಕೆ ಎಷ್ಟು ಅನುದಾನ ಕೊಡಲಾಗಿದೆ ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು. ಈ ಕುರಿತು ಎರಡು ದಿನಗಳ ಕಾಲ ಚರ್ಚೆ ನಡೆಸುವಂತೆ  ಕುಮಾರಸ್ವಾಮಿ ಅವರಿಗೆ ಹೇಳುತ್ತೇನೆ ಎಂದರು.

ಸದ್ಯ ಸ್ಥಳೀಯ ಸಂಸ್ಥೆ ಹಾಗೂ ಲೋಕಸಭಾ ಚುನಾವಣೆಗೆ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದಾಗಿ ಹೇಳಿದ ಅವರು.  ತೃತೀಯ ರಂಗ ಇನ್ನೂ ಸ್ಪಷ್ಟವಾಗಿ ಹೊರಹೊಮ್ಮಿಲ್ಲ. ಒಂದೊಂದು ಕ್ಷೇತ್ರದಲ್ಲಿ ಪ್ರಾದೇಶಿಕ ಪಕ್ಷಗಳ ಬಲ ಹೆಚ್ಚಿದ್ದರೆ, ಇನ್ನೂ ಕೆಲವು ಕಡೆಗಳಲ್ಲಿ ರಾಷ್ಟ್ರೀಯ ಪಕ್ಷಗಳ ಬಲ ಹೆಚ್ಚಿದೆ. ಜೆಡಿಎಸ್ ಪಕ್ಷ ಉಳಿಸಿಕೊಂಡು ಹೋಗುವುದು ನನ್ನ ಜವಾಬ್ದಾರಿಯಾಗಿದೆ ಎಂದರು.

ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ - ಕಾಂಗ್ರೆಸ್ ಹೊಂದಾಣಿಕೆ ಕುರಿತಂತೆ ದೆಹಲಿ ಮಟ್ಟದಲ್ಲಿ ಚರ್ಚೆಯಾಗಲಿದೆ ಎಂದು ಇದೇ ವೇಳೆ ದೇವೇಗೌಡರು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com