ರೌಡಿ ಸೈಕಲ್ ರವಿ ಜೊತೆ ಎಂ.ಬಿ ಪಾಟೀಲ್ ಸಂಪರ್ಕ: ತನಿಖೆಗೆ ಜಗದೀಶ್ ಶೆಟ್ಟರ್ ಆಗ್ರಹ

ಬೆಂಗಳೂರಿನ ನಟೋರಿಯಸ್ ರೌಡಿ ಸೈಕಲ್ ರವಿ ಜೊತೆ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಏನು ಸಂಬಂಧ ಎಂಬ ಬಗ್ಗೆ ತನಿಖೆ ...
ಜಗದೀಶ್ ಶೆಟ್ಟರ್
ಜಗದೀಶ್ ಶೆಟ್ಟರ್
ಹುಬ್ಬಳ್ಳಿ: ಬೆಂಗಳೂರಿನ ನಟೋರಿಯಸ್ ರೌಡಿ ಸೈಕಲ್ ರವಿ ಜೊತೆ ಕಾಂಗ್ರೆಸ್ ಮುಖಂಡ ಮತ್ತು ಮಾಜಿ ಸಚಿವ ಎಂ.ಬಿ ಪಾಟೀಲ್ ಅವರಿಗೆ ಏನು ಸಂಬಂಧ ಎಂಬ ಬಗ್ಗೆ ತನಿಖೆ ನಡೆಸಬೇಕು ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಸುಮಾರು 80 ಬಾರಿ ಪಾಟೀಲ್ ರವಿ ಜೊತೆ ಮಾತನಾಡಿದ್ದಾರೆ, ಹೀಗಾಗಿ ಈ ಸಂಬಂಧ ಪೊಲೀಸರು ತನಿಖೆ ನಡೆಸಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಕುಮಾರ ಸ್ವಾಮಿ ಮತ್ತು ಡಿಸಿಎಂ ಪರಮೇಶ್ವರ್ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ, ಯಾವುದೇ ಒತ್ತಡಗಳಿಗೊಳಗಾಗದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕೆಂದು ಒತ್ತಾಯಿಸಿದ್ದಾರೆ,
ಇದೇ ವೇಳೆ ತಮಗೂ ಹಾಗೂ ಸೈಕಲ್ ರವಿಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಎಂ.ಬಿ ಪಾಟೀಲ್ ಸ್ಪಷ್ಟ ಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com