ಪ್ರಧಾನಿ ಮೋದಿಯ 'ಒಂದು ದೇಶ, ಒಂದು ಚುನಾವಣೆ' ಪರಿಕಲ್ಪನೆಗೆ ಬಿಎಸ್ ವೈ ಬೆಂಬಲ

ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಸಬೇಕು ಎಂಬ ....
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on: 
ಶಿವಮೊಗ್ಗ: ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ಏಕಕಾಲಕ್ಕೆ ನಡೆಸಬೇಕು ಎಂಬ ಪ್ರಧಾನಿ ನರೇಂದ್ರ ಮೋದಿ ಅವರ ವಿಚಾರ ಒಂದು ಉತ್ತಮ ಪರಿಕಲ್ಪನೆ. ಆದರೆ ಅದನ್ನು ಜಾರಿಗೆ ತರುವುದು ಸ್ವಲ್ಪ ಕಷ್ಟ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಎಸ್ ವೈ,  'ಒಂದು ದೇಶ, ಒಂದು ಚುನಾವಣೆ' ಪರಿಕಲ್ಪನೆಯನ್ನು ಎಲ್ಲಾ ರಾಜ್ಯಗಳು ಒಪ್ಪಿಕೊಳ್ಳಬೇಕು ಎಂದಿದ್ದಾರೆ.
ಮುಂದಿನ ವರ್ಷವೇ ಲೋಕಸಭೆ ಮತ್ತು ಎಲ್ಲಾ ರಾಜ್ಯಗಳ ವಿಧಾನಸಭೆ ಚುನಾವಣೆ ನಡೆಸುವುದು ಕಷ್ಟ. ಆದರೆ ನಂತರದ ಚುನಾವಣೆಯಲ್ಲಿ ಜಾರಿಗೆ ತರಬಹುದು ಎಂದರು.
ಇದೇ ವೇಳೆ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಒಂದು ತಿಂಗಳಲ್ಲಿ ರೈತರ ಕೈಗೆ ಸಾಲ ಮುಕ್ತ ಪತ್ರ ಸಿಗಲಿದೆ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಮಾಜಿ ಸಿಎಂ, ನಾನು ಅದಕ್ಕಾಗಿ ಕಾಯುತ್ತಿಲ್ಲ. ಆದರೆ ರಾಷ್ಟ್ರಕೃತ ಮತ್ತು ಸಹಕಾರಿ ಬ್ಯಾಂಕ್ ಗಳಿಗೆ ಸಾಲ ಹೇಗೆ ಮರುಪಾವತಿ ಮಾಡುತ್ತಾರೆ ಎಂಬುದನ್ನು ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ತಿಳಿಸಬೇಕು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com