ರಾಜಕೀಯ

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಯಾರ ವಿರೋಧವೂ ಇಲ್ಲ: ಸಿದ್ದರಾಮಯ್ಯ

ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿಗೆ ಯಾರ ವಿರೋಧವೂ ಇಲ್ಲ: ಸಿದ್ದರಾಮಯ್ಯ
ರಾಹುಲ್ ಗಾಂಧಿ ಮತ್ತು ಸಿದ್ದರಾಮಯ್ಯ
Published On :
ಬೆಂಗಳೂರು: 2019ರ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಯಾರ ವಿರೋಧವೂ ಇಲ್ಲ ಎಂದು ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 
ದೆಹಲಿಯಲ್ಲಿ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಜೆಡಿಎಸ್ ಜೊತೆಗೆ ಹೊಂದಾಣಿಕೆ ಮಾಡಿಕೊಂಡೇ ಲೋಕಸಭೆ ಚುನಾವಣೆ ಎದುರಿಸುತ್ತೇವೆ ಈ ಸಂಬಂಧ ಮಾತುಕತೆ ಮುಂದುವರಿದಿದೆ ಎಂದು ಹೇಳಿದ್ದಾರೆ. 
ಪಕ್ಷದ ತಳಮಟ್ಟದ ಕಾರ್ಯಕರ್ತರು ಹೊಂದಾಣಿಕೆಗೆ ವಿರೋಧ ವ್ಯಕ್ತ ಪಡಿಸಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆಯಲ್ಲ  ಎಂಬ ಪ್ರಶ್ನೆಗೆ  ಉತ್ತರಿಸಿದ ಸಿದ್ದರಾಮಯ್ಯ, ಜೆಡಿಎಸ್ ಜೊತೆಗಿನ ಮೈತ್ರಿಗೆ ಪಕ್ಷದಲ್ಲಿ ಯಾರೋಬ್ಬರು ವಿರೋಧ ವ್ಯಕ್ತ ಪಡಿಸಿಲ್ಲ ಎಂದು ಸ್ಪಷ್ಟಪ ಪಡಿಸಿದ್ದಾರೆ.
ಮುಂಬರುವ ಲೋಕಸಭೆ ಮತ್ತು ನಗರ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಜೊತೆಗಿನ ಮೈತ್ರಿಗೆ ಹಾಸನ ಮತ್ತು ಮಂಡ್ಯದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಹೀಗಿದ್ದರೂ ಪಕ್ಷದ ಹೈಕಮಾಂಡ್ ಹೀಗಾಗಲ್ ಮೈತ್ರಿ ಬಗ್ಗೆ ಘೋಷಿಸಿದೆ.
ಇನ್ನೂ ಆಷಾಢದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದ್ದು, ನಿಗಮ ಮಂಡಳಿ ಸಚಿವ ಸ್ಥಾನ ಒಟ್ಟಿಗೆ ಭರ್ತಿಗೆ ಹೈಕಮಾಂಡ್ ಸೂಚನೆ ಕೊಟ್ಟಿದೆ  ಸಿದ್ದರಾಮಯ್ಯ ಹೇಳಿದ್ದಾರೆ.
.
30 ನಿಗಮ ಮಂಡಳಿ ಏಕಕಾಲದಲ್ಲಿ ಭರ್ತಿ ಮಾಡಲಾಗುವುದು. 20 ಕಾಂಗ್ರೆಸ್ ಮತ್ತು 10 ಜೆಡಿಎಸ್ ಗೆ ಹಂಚಿಕೆ ಮಾಡಲಾಗುತ್ತದೆ. ಜಿಲ್ಲಾ ಉಸ್ತುವಾರಿ ನೇಮಕ ಬಗ್ಗೆ ಕುಮಾರಸ್ವಾಮಿ ನಿರ್ಧಾರ ತೆಗೆದುಕೊಳ್ಳುತ್ತಾರೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.