ನನ್ನನ್ನು ಸಂಪುಟಕ್ಕೆ ಪರಿಗಣಿಸಬೇಕು: ಶಾಸಕ ಬಿ.ಸಿ. ಪಾಟೀಲ್

ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಂಪುಟ ವಿಸ್ತರಣೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಕೂಡ ಸಚಿವ ಸ್ಥಾನದ ಪ್ರಬಲ ..
ಬಿ,ಸಿ ಪಾಟೀಲ್
ಬಿ,ಸಿ ಪಾಟೀಲ್
Updated on: 
ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕರಿಗೆ ಸಂಪುಟ ವಿಸ್ತರಣೆ ಬಹುದೊಡ್ಡ ಸವಾಲಾಗಿ ಪರಿಣಮಿಸಿದೆ. ಕಾಂಗ್ರೆಸ್ ಶಾಸಕ ಬಿ.ಸಿ ಪಾಟೀಲ್ ಕೂಡ ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದಾರೆ. ತಮಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ತಮಗೆ ಬೇಡ, ನನ್ನನ್ನು ಸಚಿವ ಸ್ಥಾನಕ್ಕೆ ಪರಿಗಣಿಸಬೇಕು ಎಂದು ಆಗ್ರಹಿಸಿದ್ದಾರೆ. 
ಹಾವೇರಿ, ಗದಗ ಮತ್ತು ಧಾರವಾಡ ಜಿಲ್ಲೆಗಳಿಂದ ಲಿಂಗಾಯತ ಸಮುದಾಯದ ಏಕೈಕ ಲಿಂಗಾಯತ ಶಾಸಕ ನಾನೋಬ್ಬನೇ, ಹೀಗಾಗಿ ನನಗೆ ಸಂಪುಟ ವಿಸ್ತರಣೆಯಲ್ಲಿ ನನಗೆ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಮಾಜಿ ಸಚಿವರಾದ ಎಂ.ಬಿ ಪಾಟೀಲ್, ಎಚ್,ಕೆ ಪಾಟೀಲ್, ರಾಮಲಿಂಗಾರೆಡ್ಡಿ, ರೋಷನ್ ಬೇಗ್ ಸೇರಿದಂತೆ ಹಲವಾರು  ನಾಯಕರು ಸಂಪುಟಕ್ಕೆ ಸೇರಬೇಕೆಂದು ಆಕ್ರೋಶಗೊಂಡಿದ್ದಾರೆ.  ಮುನಿಸಿಕೊಂಡಿರುವ ಶಾಸಕರನ್ನು ಸಮಾಧಾನ ಪಡಿಸಲು ನಿಗಮ-ಮಂಡಳಿಗಳ ಅಧ್ಯಕ್ಷ ಸ್ಥಾನ ನೀಡಲು ರಾಜ್ಯ ಕಾಂಗ್ರೆಸ್ ಮುಂದಾಗಿದೆ, ಆಗಸ್ಟ್ 2ನೇ ವಾರದಲ್ಲಿ ಸಂಪುಟ ವಿಸ್ತರಣೆ ನಡೆಯಲಿದೆ.
ಹಲವು ನಾಯಕರಿಗೆ ಆಷಾಡದಲ್ಲಿ ಸಂಪುಟ ವಿಸ್ತರಣೆಯಾಗುವುದು ಬೇಕಿಲ್ಲ, ಹೀಗಾಗಿ ಆಗಸ್ಟ್ ತಿಂಗಳಲ್ಲಿ  ಸಂಪುಟ ವಿಸ್ತರಣೆ ನಡೆಯಲಿದೆ ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com