ಲೋಕಸಭೆ ಚುನಾವಣೆಯಲ್ಲಿ ಸಿದ್ದರಾಮಯ್ಯ ಬೆಂಬಲಿಗರಿಗೆ ಮಣೆ: ಪ್ರತಾಪ್ ಸಿಂಹ ವಿರುದ್ಧ ವಿಜಯ್ ಶಂಕರ್ ಸ್ಪರ್ಧೆ!

ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಹೀಗಿರುವಾಗ ತಮ್ಮ ಆಪ್ತರ ಹಾಗೂ ಬೆಂಬಲಿಗರ ...
ಸಿದ್ದರಾಮಯ್ಯ
ಸಿದ್ದರಾಮಯ್ಯ
ಮೈಸೂರು: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಕಾಂಗ್ರೆಸ್ ನಿರ್ಧರಿಸಿದೆ. ಹೀಗಿರುವಾಗ ತಮ್ಮ ಆಪ್ತರ ಹಾಗೂ ಬೆಂಬಲಿಗರ ಹಿತಾಸಕ್ತಿ ಕಾಪಾಡಿಕೊಳ್ಳಲು ಮಾಜಿ ಸಿಎಂ ಸಿದ್ದರಾಮಯ್ಯ ಯತ್ನಿಸುತ್ತಿದ್ದಾರೆ.
ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಹೆಚ್ಚಿನ ಸಂಖ್ಯೆಯಲ್ಲಿ ಗೆಲುವು ಸಾಧಿಸಿದೆ. ಅದರಲ್ಲೂ ವಿಶೇಷವಾಗಿ ಒಕ್ಕಲಿಗ ಪ್ರಾತಿನಿಧ್ಯವಿರುವ ಕ್ಷೇತ್ರಗಳಲ್ಲಿ ಜೆಡಿಎಸ್ ಪ್ರಾಬಲ್ಯ ಸಾಧಿಸಿದೆ. ಮಂಡ್ಯ, ಹಾಸನ, ಮೈಸೂರು-ಕೊಡಗು, ಮತ್ತು ತುಮಕೂರು ಲೋಕಸಭೆ ಕ್ಷೇತ್ರಗಳಿಂದ ಸ್ಪರ್ಧಿಸಲು ಜೆಡಿಎಸ್ ಸಿದ್ಧತೆ ನಡೆಸಿದೆ. ಆದರೆ ಸಿದ್ದರಾಮಯ್ಯ ಮೈಸೂರು-ಕೊಡಗು, ಮಂಡ್ಯ ಲೋಕಸಭೆ ಕ್ಷೇತ್ರಗಳಲ್ಲಿ ತಮ್ಮ ಬೆಂಬಲಿಗರ ಮತ್ತು ಆಪ್ತರ ಕಣಕ್ಕಿಳಿಸಲು ತಮ್ಮ ಸಾಮರ್ಥ್ಯ ತೋರಲು ಮುಂದಾಗಿದ್ದಾರೆ.
ಇತ್ತೀಚಗಿ ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ ಮಾಜಿ ಸಂಸದ ಸಿ,ಎಚ್ ವಿಜಯ್ ಶಂಕರ್ ಗೆ ಸಿದ್ದರಾಮಯ್ಯ ಬೆಂಬಲ ಸೂಚಿಸಿದ್ದಾರೆ. ಮೈಸೂರು-ಕೊಡಗು ಸಂಸದೀಯ ಕ್ಷೇತ್ರದ ಮೇಲೆ ಕಣ್ಣಿಟ್ಟಿರುವ ವಿಜಯ್ ಶಂಕರ್ ಯಾವುದೇ ಹುದ್ದೆ ನೀಡುವಂತೆ ಕೇಳಿರಲಿಲ್ಲ. ಬಿಜೆಪಿಯಿಂದ ಈ ಕ್ಷೇತ್ರದಲ್ಲಿ 2 ಬಾರಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಒಂದು ವೇಳೆ ಮೈಸೂರು-ಕೊಡಗು ಕ್ಷೇತ್ರಕ್ಕೆ ಕಾಂಗ್ರೆಸ್ ಹಿಂದುಳಿದ ವರ್ಗಗಳ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿದ್ದರೇ, ಒಕ್ಕಲಿಗ ಮತ್ತು ವೀರಶೈವ ಪ್ರಾಬಲ್ಯವಿರುವ ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲುವು ಕಷ್ಟವಾಗುತ್ತದೆ ಎಂದು ವಿಶ್ಲೇಷಿಸಲಾಗಿದೆ. 
ಹೀಗಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಬೆಂಬಲದೊಂದಿಗೆ ಬಿಜೆಪಿ ಹಾಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ವಿಜಯ್ ಶಂಕರ್ ಅವರನ್ನು ಕಣಕ್ಕಿಳಿಸಲು ಸಿದ್ದರಾಮಯ್ಯ ತಂತ್ರ ರೂಪಿಸುತ್ತಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com