ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸಲು ಸಿದ್ಧ: ಶ್ರೀರಾಮುಲು

ಪ್ರತ್ಯೇಕ ರಾಜ್ಯದ ಕೂಗಿಗೆ ಕಿಚ್ಚು ಹಚ್ಚಿದ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ....
ಬಿ ಶ್ರೀರಾಮುಲು
ಬಿ ಶ್ರೀರಾಮುಲು
ಬಳ್ಳಾರಿ: ಪ್ರತ್ಯೇಕ ರಾಜ್ಯದ ಕೂಗಿಗೆ ಕಿಚ್ಚು ಹಚ್ಚಿದ ಬಿಜೆಪಿ ಶಾಸಕ ಬಿ. ಶ್ರೀರಾಮುಲು ಅವರು, ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟದ ನೇತೃತ್ವ ವಹಿಸಿಕೊಳ್ಳಲು ಸಿದ್ಧ ಎಂದು ಶುಕ್ರವಾರ ಹೇಳಿದ್ದಾರೆ.
ಇಂದು ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀರಾಮುಲು, ಉತ್ತರ ಕರ್ನಾಟಕಕ್ಕೆ ಅನ್ಯಾಯವಾದರೆ ಸಹಿಸುವುದಿಲ್ಲ, ಪ್ರತ್ಯೇಕ ರಾಜ್ಯಕ್ಕಾಗಿ ತೆಲಂಗಾಣ ಮಾದರಿಯಲ್ಲಿ  ಹೋರಾಟ ನಡೆಸಬೇಕಾಗುತ್ತದೆ. ಹೋರಾಟದ ನೇತೃತ್ವವನ್ನು ನಾನೇ ವಹಿಸುತ್ತೇನೆ ಗುಡುಗಿದ್ದಾರೆ. 
ಇದೇ ವೇಳೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಶ್ರೀರಾಮುಲು, ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ವಿಚಾರದಲ್ಲಿ ಸಿಎಂ ತಾರತಮ್ಯ ನೀತಿ ಅನುಸರಿಸುತ್ತಿದ್ದಾರೆ ಎಂದು ಆರೋಪಿಸಿದರು.
ರೈತರ ಎಲ್ಲಾ ಸಾಲ ಮನ್ನಾ ಮಾಡಲು ಕುಮಾರಸ್ವಾಮಿಗೆ ಆಗಿಲ್ಲ ಮತ್ತು ಮನ್ನಾ ಮಾಡಿದ ಸಾಲದ ಕುರಿತು ಅಧಿಸೂಚನೆಯನ್ನು ಹೊರಡಿಸಿಲ್ಲ. ಬಜೆಟ್‌ ಬಳಿಕ ಉತ್ತರ ಕರ್ನಾಟಕದ ಎಲ್ಲಾ ಶಾಸಕರೊಂದಿಗೆ ಮಾತಾಡಿದ್ದೇನೆ. ಮಾತುಕತೆ ಮುಂದುವರಿದಿದೆ. ಅನ್ಯಾಯ ಮುಂದುವರಿದರೆ ತೆಲಂಗಾಣ ಮಾದರಿ ಹೋರಾಟ ಮಾಡಲು ಸಿದ್ದ ಎಂದು ಎಚ್ಚರಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಬಜೆಟ್ ನಲ್ಲಿ ಉತ್ತರ ಕರ್ನಾಟಕ್ಕೆ ಭಾರೀ ಅನ್ಯಾಯ ಮಾಡಿದ್ದಾರೆ . ಈಗ ಕಣ್ಣೀರಿಟ್ಟು ನಾಟಕ ಮಾಡುತ್ತಿದ್ದಾರೆ. ನಿಜವಾಗಿಯೂ ಕಣ್ಣೀರಿಡಬೇಕಾಗಿದ್ದು ಉತ್ತಕರ್ನಾಟಕದ ಜನತೆ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com