ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯ ಬೇಡಿಕೆಗೆ ಬಿಜೆಪಿ ಕುಮ್ಮಕ್ಕು: ಡಿ.ಕೆ. ಶಿವಕುಮಾರ್

ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ ಬಿಜೆಪಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು ವೈದ್ಯಕೀಯ ಮತ್ತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಡಿ. ಕೆ. ಶಿವಕುಮಾರ್
ಡಿ. ಕೆ. ಶಿವಕುಮಾರ್
ಬೆಂಗಳೂರು:ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರ್ಕಾರದ ಅಭಿವೃದ್ದಿ ಕಾರ್ಯಗಳನ್ನು ಸಹಿಸದೆ  ಬಿಜೆಪಿ ಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಬೇಡಿಕೆಗೆ ಕುಮ್ಮಕ್ಕು ನೀಡುತ್ತಿದೆ ಎಂದು  ವೈದ್ಯಕೀಯ ಮತ್ತು ಜಲಸಂಪನ್ಮೂಲ ಸಚಿವ ಡಿ. ಕೆ. ಶಿವಕುಮಾರ್ ಆರೋಪಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕಕ್ಕೆ ಅನುದಾನ ಹಂಚಿಕೆಯ ವಿಷಯದಲ್ಲಿ ತಾರತಮ್ಯ ಮಾಡಲಾಗಿದೆ ಎನ್ನುವ ನೆಪವೊಡ್ಡಿ ರಾಜ್ಯವನ್ನು ಇಬ್ಬಾಗ ಮಾಡುವಂತಹ ಕೃತ್ಯಕ್ಕೆ ಬಿಜೆಪಿ  ಕೈ ಹಾಕಿದೆ. ಅದು ಎಂದಿಗೂ ಫಲಿಸುವುದಿಲ್ಲ ಎಂದು ಹೇಳಿದರು.
ಸಾಲಮನ್ನಾ ವಿಷಯವಾಗಿ ಬಿಜೆಪಿ ನಡೆಸಿರುವ ಪಾದಯಾತ್ರೆಯಲ್ಲಿ ಯಾವೊಬ್ಬ ಹಳ್ಳಿಗಾಡಿನ ರೈತರು ಇರಲಿಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರೆ, ಹಸಿರು ಶಾಲು ಹಾಕಿದಾಕ್ಷಣ ರೈತರಾಗಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com