ಸಚಿವ ಸ್ಥಾನ ನಿರಾಕರಣೆ: ಕಾಂಗ್ರೆಸ್ ನ ಹಿರಿಯ ನಾಯಕರಲ್ಲಿ ಎದ್ದಿರುವ ಅಸಮಾಧಾನ

ಸಚಿವ ಸಂಪುಟ ರಚನೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹರಸಾಹಸವಾಗಿ ಕಾಡುತ್ತಿದೆ. ಹೊಸಬರಿಗೆ ಅವಕಾಶ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಸಚಿವ ಸಂಪುಟ ರಚನೆ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಹರಸಾಹಸವಾಗಿ ಕಾಡುತ್ತಿದೆ. ಹೊಸಬರಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ಸಂಪುಟದಿಂದ ದೂರವಿಡುವ ಪ್ರಸ್ತಾವನೆಯಿಂದ ಪಕ್ಷದ ಹಿರಿಯ ನಾಯಕರು ತೀವ್ರ ಅಸಮಾಧಾನಗೊಂಡಿದ್ದಾರೆ.

ಈಗಾಗಲೇ ಎರಡು ಅವಧಿಗೆ ಮಂತ್ರಿಗಳಾಗಿ ಅಧಿಕಾರ ವಹಿಸಿರುವ ಮತ್ತು ಈ ಬಾರಿ ಶಾಸಕರಾಗದಿರುವ ನಾಯಕರುಗಳಿಗೆ ಸಚಿವ ಸ್ಥಾನ ನೀಡಲು ಪಕ್ಷದ ಹೈಕಮಾಂಡ್ ನಿರ್ಧರಿಸಿರುವುದರಿಂದ ಕೆಲವು ನಾಯಕರು ಅಸಂತುಷ್ಟಗೊಂಡಿದ್ದಾರೆ. ಸತತವಾಗಿ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ಶಾಸಕರಿಗೆ ಈ ಬಾರಿ ಸಚಿವ ಸ್ಥಾನ ನೀಡಲಾಗುತ್ತಿದೆ. ತಮ್ಮನ್ನು ಮೂಲೆಗುಂಪು ಮಾಡಲು ನಡೆಸುತ್ತಿರುವ ಪ್ರಯತ್ನ ಎಂದು ತಿಳಿದುಕೊಂಡಿರುವ ಮಾಜಿ ಸಚಿವರುಗಳು ಈ ಬಗ್ಗೆ ತಮ್ಮ ಅಸಮಾಧಾನ, ಬೇಸರಗಳನ್ನು ಪಕ್ಷದ ಹಿರಿಯ ನಾಯಕರ ಮುಂದೆ ತೋಡಿಕೊಂಡಿದ್ದಾರೆ ಎನ್ನಲಾಗುತ್ತಿದೆ.

ಕೆಲವು ನಾಯಕರನ್ನು ಸಚಿವ ಸ್ಥಾನದಿಂದ ಹೊರಗಿಡಲು ಹಿರಿತನದ ಪ್ರಸ್ತಾವನೆ ತರಲಾಗಿದೆ. ಯಾವುದೇ ನಿರ್ಧಾರ ತೆಗೆದುಕೊಳ್ಳುವ ಮೊದಲು ಹಿರಿಯರನ್ನು ಪಕ್ಷ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ಆದರೆ ಎಲ್ಲಾ ಹಿರಿಯ ನಾಯಕರ ಜೊತೆ ಸಮಾಲೋಚನೆ ನಡೆಸಿಲ್ಲ ಎಂದು ಮೂಲಗಳು ಹೇಳುತ್ತವೆ. ಪಕ್ಷದಲ್ಲಿ ಹಿರಿಯ ನಾಯಕರು ಅಸಮಾಧಾನಗೊಂಡರೆ ಸರ್ಕಾರದ ಮೇಲೆ ಪರಿಣಾಮ ಬೀರುತ್ತದೆ.

ಕಾಂಗ್ರೆಸ್ ಹೈಕಮಾಂಡ್ ಹೊಸ ಮುಖಗಳನ್ನು ಈ ಬಾರಿ ಸಂಪುಟ ರಚನೆಗೆ ಸೇರಿಸಿಕೊಂಡರೆ ಮತ್ತು 2019ರ ಲೋಕಸಭೆ ಚುನಾವಣೆಗೆ ಮುನ್ನ ಹಿರಿಯರನ್ನು ಬಳಸಿಕೊಂಡು ಪಕ್ಷವನ್ನು ಬಲಪಡಿಸಲು ಯತ್ನಿಸುತ್ತಿದ್ದರೆ ಪರಮೇಶ್ವರ್ ಅವರನ್ನು ಉಪ ಮುಖ್ಯಮಂತ್ರಿ ಏಕೆ ಮಾಡಬೇಕಾಗಿತ್ತು ಎಂದು ಮಾಜಿ ಸಚಿವರೊಬ್ಬರು ಕೇಳುತ್ತಾರೆ. ಮಾಜಿ ಸಚಿವರುಗಳನ್ನು ಮೂಲೆಗುಂಪು ಮಾಡಲು ಹೊಸ ಉಪಾಯಗಳನ್ನು ಮಾಡಲಾಗುತ್ತಿದೆ. ಹೈಕಮಾಂಡ್ ನ ಇಂತಹ ಮನೋಧರ್ಮದಿಂದ ನಮಗೆ ಬೇಸರವಾಗಿದೆ ಎನ್ನುತ್ತಾರೆ.

ನಿನ್ನೆ ಪಕ್ಷದ ಪದಾಧಿಕಾರಿಗಳ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಈಗಾಗಲೇ ಎರಡು ಬಾರಿ ಸಚಿವರಾಗಿರುವವರಿಗೆ ಈ ಬಾರಿ ಸಚಿವ ಸ್ಥಾನ ನೀಡದಿರಬಹುದು. ಪಕ್ಷದ ನಾಯಕರ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಲಾಗಿದ್ದು ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದರು.

ಪಕ್ಷಗಳು ಮತ್ತು ಸರ್ಕಾರದ ನಡುವೆ ಚೆನ್ನಾಗಿ ಹೊಂದಾಣಿಕೆಯಾಗಲು ಕೆಲವು ಹಿರಿಯ ನಾಯಕರನ್ನು ಕೂಡ ಸಂಪುಟಕ್ಕೆ ಸೇರಿಸುವುದು ಒಳಿತು ಎಂದು ಜೆಡಿಎಸ್ ಕೂಡ ಸಲಹೆ ನೀಡಿದೆ ಎನ್ನಲಾಗುತ್ತಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಏನು ನಿರ್ಧಾರ ತೆಗೆದುಕೊಳ್ಳಲಿದೆ ಎಂಬುದು ಕುತೂಹಲಕರ ವಿಷಯ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com