ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಡಿಕೆಶಿ, ದಿನೇಶ್ ಪಟ್ಟು: ಹೈಕಮಾಂಡ್ ಗೆ ಇಕ್ಕಟ್ಟು

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆ ನೇಮಕ ವಿಚಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರಿಗೆ...
ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್ ಮತ್ತು ರಾಹುಲ್ ಗಾಂಧಿ
ಡಿಕೆ ಶಿವಕುಮಾರ್, ದಿನೇಶ್ ಗುಂಡೂರಾವ್ ಮತ್ತು ರಾಹುಲ್ ಗಾಂಧಿ
ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹುದ್ದೆ ನೇಮಕ ವಿಚಾರ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಮತ್ತು ಹಿರಿಯ ಕಾಂಗ್ರೆಸ್ ನಾಯಕರಿಗೆ ತಲೆನೋವಾಗಿ ಪರಿಣಮಿಸಿದೆ. 
ಮಂಗಳವಾರ ರಾಹುಲ್ ಗಾಂಧಿ ರಾಜ್ಯದ ಹಿರಿಯ ಕಾಂಗ್ರೆಸ್ ನಾಯಕರ ಜೊತೆ ಚರ್ಚೆ ನಡೆಸಿದ್ದು, ಸಂಪುಟ ವಿಸ್ತರಣೆ ನಂತರ ಕೆಪಿಸಿಸಿ ಅಧ್ಯಕ್ಷ ಸ್ಥಾನ ಸಂಬಂಧ ಚರ್ಚಿಸಲಿದ್ದಾರೆ.
ಒಂದು ವೇಳೆ ತಮಗೆ ಸಚಿವ ಸ್ಥಾನ ನೀಡದಿದ್ದರೇ  ಕೆಪಿಸಿಸಿ ಅಧ್ಯಕ್ಷ ಹುದ್ದೆ ರೇಸ್ ನಲ್ಲಿರುವುದಾಗಿ ದಿನೇಶ್ ಗುಂಡೂರಾವ್ ಹೇಳಿದ್ದಾರೆಂದು ಮೂಲಗಳಿಂದ ತಿಳಿದು ಬಂದಿದೆ. ಒಬ್ಬರಿಗೆ ಒಂದೇ ಹುದ್ದೆ ಎಂಬ ರಾಹುಲ್ ಗಾಂಧಿ ಹೇಳಿಕೆಯಿಂದಾಗಿ ಮಾಜಿ ಸಚಿವ ಡಿ.ಕೆ ಶಿವಕುಮಾರ್ ತೀವ್ರ ನಿರಾಸೆಗೊಂಡಿದ್ದಾರೆ, ಆದರೆ ಸಚಿವ ಸಂಪುಟದ ಜೊತೆಗೆ ತಮಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡಬೇಕೆಂದು ಪಟ್ಟು ಹಿಡಿದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com