ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಅಂತ ಯಾರು ಹೇಳಿದ್ರು?: ಸಿದ್ದರಾಮಯ್ಯ

ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಅಂತ ಯಾರು ಹೇಳಿದ್ದು ಎಂದು ಮಾಜಿ ಮುಖ್ಯಮಂತ್ರಿ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬಾಗಲಕೋಟೆ: ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಕಡೆಗಣಿಸಲಾಗಿದೆ ಅಂತ ಯಾರು ಹೇಳಿದ್ದು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಪ್ರಶ್ನಿಸಿದ್ದಾರೆ. 
ಇಂದು ಬಾದಾಮಿಯ ಬನಶಂಕರಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಮಾಜಿ ಸಿಎಂ, ಸಮ್ಮಿಶ್ರ ಸರ್ಕಾರದಲ್ಲಿ ನನ್ನನ್ನು ಮತ್ತು ಬೆಂಬಲಿಗರನ್ನು ಕಡೆಗಣನೆ ಮಾಡಿಲ್ಲ ಎಂದರು.
ನಾನು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ. ನನ್ನನ್ನು ಕಡೆಗಣಿಸಲಾಗಿಲ್ಲ. ಸರ್ಕಾರ ರಚನೆ ವೇಳೆ ನನ್ನ ಸಲಹೆಗಳನ್ನೂ ಪಡೆಯಲಾಗಿದೆ. ಸಮ್ಮಿಶ್ರ ಸರ್ಕಾರದಲ್ಲಿ  ಅಸಮಾಧಾನಗಳು ಸಾಮಾನ್ಯ ಎಂದರು.
ಸಚಿವ ಸಂಪುಟದಲ್ಲಿ ತಮ್ಮ ಆಪ್ತರು ಇಲ್ಲ ಎನ್ನುವುದಕ್ಕಿಂತ ಸದ್ಯ ಮಂತ್ರಿ ಆದವರು ತಮ್ಮ ಪರಮಾಪ್ತರಲ್ಲೇ ಪರಮಾಪ್ತರು. ಪಕ್ಷ, ಸರ್ಕಾರ ಎಂದು ಹೇಳಿ ಅಧಿಕಾರ ಮಾಡಬೇಕೆ ಹೊರತು ಆಪ್ತರು, ಪರಮಾಪ್ತರಿಗೆ ಸಚಿವ ಸ್ಥಾನ ಸಿಕ್ಕಿಲ್ಲ ಎಂದು ಅಲ್ಲ ಎಂದರು.
ಈಗ ಖಾಲಿ ಇರುವ ಆರು ಸ್ಥಾನಗಳನ್ನು ಪ್ರಾದೇಶಿಕತೆ, ಜಾತಿ ಹಾಗೂ ಸಾಮಾಜಿಕ ನ್ಯಾಯದ ಮೇಲೆ ಹಂಚಿಕೆ ಮಾಡಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.
ಇದೇ ವೇಳೆ ಕಾಂಗ್ರೆಸ್ ಜೆಡಿಎಸ್ ಪಕ್ಷಕ್ಕೆ ಶರಣಾಗಿಲ್ಲ. ಕೋಮುವಾದಿ ಪಕ್ಷ ಅಧಿಕಾರಕ್ಕೆ ಬರಬಾರದು ಎಂಬ ಕಾರಣಕ್ಕೆ ಜೆಡಿಎಸ್‌ಗೆ ಮುಖ್ಯಮಂತ್ರಿ ಸ್ಥಾನ ಬಿಟ್ಟು ಕೊಟ್ಟಿದ್ದೇವೆ ಎಂದರು.
ಬಾದಾಮಿಯಲ್ಲಿ ಗೆದ್ದ ಬಳಿಕ ಮೊದಲ ಭಾರಿಗೆ ಕ್ಷೇತ್ರಕ್ಕೆ ಆಗಮಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ಐದು ವರ್ಷಗಳ ಅವಧಿಯಲ್ಲಿ ಬಾದಾಮಿ ಸಮಗ್ರ ಅಭಿವೃದ್ಧಿ ಪಡಿಸುತ್ತೇನೆ ಎಂದು ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com