ಪಾಟೀಲ್ ಮನೆಯಲ್ಲಿ ನಿನ್ನೆ ದಿನ ಪೂರ್ತಿ ಹಲವು ಸಭೆಗಳು ನಡೆದಿವೆ, ಎಐಸಿಸಿ ಕಾರ್ಯದರ್ಶಿ ಸತೀಶ್ ಜಾರಕಿಹೊಳಿ, ರೋಷನ್ ಬೇಗ್, ಹೊಸಕೋಟೆ ಶಾಸಕ ಎಂಟಿಬಿ ನಾಗರಾಜ್, ಚಿಕ್ಕಬಳ್ಳಾಪುರ ಶಾಸಕ ಕೆ. ಸುಧಾಕರ್ ಸೇರಿದಂತೆ ಸಚಿವ ಸ್ಥಾನ ವಂಚಿತರಾದ ಹಲವು ಶಾಸಕರು ಪಾಟೀಲ್ ಮನೆಯಲ್ಲಿ ಸಭೆ ನಡೆಸಿದರು. ಮುಂದಿನ ದಿನಗಳಲ್ಲಿ ಯಾವುದೇ ಜವಾಬ್ದಾರಿ ನೀಡಿದರೂ ತಾವು ಸ್ವೀಕರಿಸುವುದಿಲ್ಲ ಎಂದು ಪಾಟೀಲ್ ಕಡ್ಡಿ ತುಂಡು ಮಾಡಿದಂತೆ ಹೇಳಿದ್ದಾರೆ.