ಪ್ರಮುಖವಾಗಿ ಭಿನ್ನಮತೀಯ ಶಾಸಕರ ಬಣದ ಮುಂಚೂಣಿಯಲ್ಲಿರುವ ಮಾಜಿ ಸಚಿವ ಎಂ.ಬಿ. ಪಾಟೀಲರಿಗೆ, ತಾಳ್ಮೆಯಿಂದ ಇರುವಂತೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಶನಿವಾರ ಸೂಚಿಸಿದ್ದಾರೆ ಎನ್ನಲಾಗಿದೆ. ಇದೇ ಕಾರಣಕ್ಕೆ ಎಂಬಿ ಪಾಟೀಲ್ ತಮ್ಮ ಅಸಮಾಧಾನವನ್ನು ನುಂಗಿಕೊಂಡು ಬರಿ ಗೈಯಲ್ಲಿ ಕರ್ನಾಟಕಕ್ಕೆ ವಾಪಸ್ ಆಗಿದ್ದಾರೆ. ಇತ್ತ ಬಂಡಾಯ ನಾಯಕ ಅಸಮಾಧಾನ ಶಮನಕ್ಕೆ ಸಕಲ ಕಸರತ್ತು ನಡೆಯುತ್ತಿದ್ದು, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಲೋಕಸಭೆಯಲ್ಲಿ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಭಿನ್ನಮತ ಶಮನಗೊಳಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.