ಜೂನ್ 14ರಂದು ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರದ ಸಮನ್ವಯ ಸಮಿತಿ ಸಭೆ

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆಯ ಇದೇ ಜೂನ್ 14 ರಂದು ಅಧ್ಯಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಮೊದಲ ಸಮನ್ವಯ ಸಮಿತಿ ಸಭೆಯ ಇದೇ ಜೂನ್ 14 ರಂದು ಅಧ್ಯಕ್ಷ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಲಿದೆ.
ಮೈತ್ರಿ ಸರ್ಕಾರ ರಚನೆಯಾದ ಬಳಿಕ ಎರಡೂ ಪಕ್ಷಗಳಲ್ಲಿ ಉಂಟಾಗಿರುವ ಗೊಂದಲ ಇನ್ನೂ ತಿಳಿಯಾಗಿಲ್ಲ. ಅಷ್ಟರಲ್ಲಿ ದಿಢೀರ್‌ ಸಮನ್ವಯ ಸಮಿತಿ ಸಭೆ ಕರೆದಿರುವುದು ಕಾಂಗ್ರೆಸ್‌ ಮತ್ತು ಜೆಡಿಎಸ್‌ ನಾಯಕರಲ್ಲಿ ಅಚ್ಚರಿ ಮೂಡಿಸಿದೆ. ಖಾತೆ ಹಂಚಿಕೆ ಸಂಬಂಧ ನಡೆದ ಸುಧೀರ್ಧ ಕಸರತ್ತು ಇದೀಗ ತಾರ್ಕಿಕ ಅಂತ್ಯಕ್ಕೆ ಬಂದು ನಿಂತಿದೆಯಾದರೂ ಸಚಿವ ಸ್ಥಾನ ಸಿಗದ ಇನ್ನೂ ಸಾಕಷ್ಟು ಶಾಸಕರು ಬಂಡಾಯದ ಬಾವುಟ ಬೀಸುತ್ತಿದ್ದಾರೆ. ತಮ್ಮ ಬೆಂಬಲಿಗರಿಂದ ಪ್ರತಿಭಟನೆ ಮಾಡಿಸುವ ಮೂಲಕ ಸಚಿವ ಸ್ಥಾನ ನೀಡುವಂತೆ ಒತ್ತಡ ಹೇರುತ್ತಿದ್ದಾರೆ.
ಈ ಬೆಳವಣಿಗೆಗಳ ಬೆನ್ನಲ್ಲೇ ಮೈತ್ರಿ ಸರ್ಕಾರ ಸಮನ್ವಯ ಸಮಿತಿ ಸಭೆ ಕರೆಯಲಾಗಿದೆ. ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಬಾದಾಮಿ ಕ್ಷೇತ್ರದ ಪ್ರವಾಸ ಮುಗಿಸಿ ವಾಪಸ್ ಬಂದಿಲ್ಲ. ಅಲ್ಲಿಂದಲೇ ಸಭೆ ನಡೆಸುವ ದಿನಾಂಕ ನಿಗದಿ ಮಾಡಿದ್ದಾರೆ. ಸಮನ್ವಯ ಸಮಿತಿಯ ಇತರ ಸದಸ್ಯರು ಮತ್ತು ಮುಖಂಡರ ಜತೆ ಚರ್ಚಿಸಿ ದಿನಾಂಕ ನಿಗದಿ ಮಾಡಿದ್ದಾರೋ ಇಲ್ಲವೊ ಗೊತ್ತಿಲ್ಲ ಎಂದು ಕಾಂಗ್ರೆಸ್‌ ನಾಯಕರೊಬ್ಬರು ತಿಳಿಸಿದ್ದಾರೆ.
ಸಮನ್ವಯ ಸಮಿತಿ ಸಭೆಯಲ್ಲಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ, ಉಪಮುಖ್ಯಮಂತ್ರಿ ಪರಮೇಶ್ವರ, ಡ್ಯಾನಿಷ್‌ ಅಲಿ, ಕೆ.ಸಿ.ವೇಣುಗೋಪಾಲ ಅವರು ಭಾಗಹಿಸಲಿದ್ದಾರೆ. ಅಲ್ಲದೆ ಸಭೆಯಲ್ಲಿ ಉಭಯ ಪಕ್ಷಗಳ ಎಲ್ಲಾ ಶಾಸಕರು ಭಾಗವಹಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com