'ಅನುಕಂಪ ವರ್ಸಸ್ ಮೈತ್ರಿ ಸಾಮರ್ಥ್ಯ': 'ಜಯ'ನಗರದಲ್ಲಿ ಮತದಾನ ಆರಂಭ

ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಮತದಾರರು...
ಮತಗಟ್ಟೆಯ ಮುಂದೆ ಹಕ್ಕು ಚಲಾಯಿಸಲು ನಿಂತಿರುವ ಜನರು
ಮತಗಟ್ಟೆಯ ಮುಂದೆ ಹಕ್ಕು ಚಲಾಯಿಸಲು ನಿಂತಿರುವ ಜನರು

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆಗೆ ಮತದಾನ ಪ್ರಕ್ರಿಯೆ ಪ್ರಗತಿಯಲ್ಲಿದೆ. ಇಂದು ಬೆಳಗ್ಗೆ 7 ಗಂಟೆಯಿಂದ ಮತದಾನ ಆರಂಭವಾಗಿದ್ದು ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ಮತ ಚಲಾಯಿಸುತ್ತಿದ್ದಾರೆ. ಈ ಮೂಲಕ ಚುನಾವಣಾ ಕಣ ರಂಗೇರಿದೆ. ಸಂಜೆ 6 ಗಂಟೆಯವರೆಗೆ ಮತದಾನ ನಡೆಯಲಿದೆ.

ಕ್ಷೇತ್ರದ 216 ಮತಗಟ್ಟೆಗಳಲ್ಲಿ ಬಿಗಿ ಭದ್ರತೆ ಕಲ್ಪಿಸಲಾಗಿದೆ. 40 ಸೂಕ್ಷ್ಮ ಮತಗಟ್ಟೆಗಳಿದ್ದು 350 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಕ್ಷೇತ್ರದಲ್ಲಿ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144ನ್ನು ಜಾರಿಗೊಳಿಸಲಾಗಿದೆ.

ಬಿಜೆಪಿ ಅಭ್ಯರ್ಥಿ ಬಿ ಎನ್ ವಿಜಯ್ ಕುಮಾರ್ ಅವರ ಸಾವಿನ ಹಿನ್ನಲೆಯಲ್ಲಿ ಮುಂದೂಡಲ್ಪಟ್ಟಿದ್ದ ಚುನಾವಣೆಯ ಮತದಾನ ಇಂದು ನಡೆಯುತ್ತಿದೆ. ಬಿಜೆಪಿಯಿಂದ ಅವರ ಸೋದರ ಬಿ ಎನ್ ಪ್ರಹ್ಲಾದ್ ಹಾಗೂ ಮಾಜಿ ಸಚಿವ ರಾಮಲಿಂಗಾ ರೆಡ್ಡಿ ಪುತ್ರಿ ಸೌಮ್ಯ ರೆಡ್ಡಿ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟದಿಂದ ಸ್ಪರ್ಧಿಸುತ್ತಿದ್ದಾರೆ. ಪಕ್ಷೇತರ ಅಭ್ಯರ್ಥಿಯಾಗಿ ರವಿ ಕೃಷ್ಣಾ ರೆಡ್ಡಿ ಮತ್ತು ಹಲವರು ಸ್ಪರ್ಧಿಸಿದ್ದಾರೆ.

ವಿಜಯ್ ಕುಮಾರ್ ಸಾವಿನಿಂದ ಬಿಜೆಪಿಗೆ ಜಯನಗರ ಕ್ಷೇತ್ರ ಅನುಕಂಪದ ಆಧಾರದ ಮೇಲೆ ಗೆಲ್ಲುವ ನಿರೀಕ್ಷೆಯಲ್ಲಿದ್ದರೆ, ಕಾಂಗ್ರೆಸ್ ಮತ್ತು ಜೆಡಿಎಸ್ ಒಗ್ಗಟ್ಟಾಗಿ ಸೌಮ್ಯ ರೆಡ್ಡಿಯವರನ್ನು ಕಣಕ್ಕಿಳಿಸಿದ್ದು ಸರ್ಕಾರಕ್ಕೆ ಈ ಕ್ಷೇತ್ರ ಪ್ರತಿಷ್ಠೆಯ ಗೆಲುವಿನ ಪ್ರಶ್ನೆಯಾಗಿದೆ. ಇದೇ ಬುಧವಾರ ಫಲಿತಾಂಶ ಹೊರಬೀಳಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com