ದಿನೇಶ್ ಗುಂಡೂರಾವ್
ದಿನೇಶ್ ಗುಂಡೂರಾವ್

ಭಿನ್ನಮತೀಯ ಶಾಸಕರ ಜೊತೆ ಸಿದ್ದರಾಮಯ್ಯ, ವೇಣುಗೋಪಾಲ್ ಸಭೆ

ಸಚಿವ ಸಂಪುಟ ವಿಸ್ತರಣೆ ನಂತರ ಆಕಾಂಕ್ಷಿಗಳಲ್ಲಿ ಉಂಟಾಗಿದ್ದ ಭಿನ್ನಮತ ಇನ್ನೂ ಕಡಿಮೆಯಾಗದ ಕಾರಣ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ...
ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ನಂತರ ಆಕಾಂಕ್ಷಿಗಳಲ್ಲಿ ಉಂಟಾಗಿದ್ದ ಭಿನ್ನಮತ ಇನ್ನೂ ಕಡಿಮೆಯಾಗದ ಕಾರಣ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಗುರುವಾರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. 
ಸಿದ್ದರಾಮಯ್ಯ ಸೇರಿದಂತೆ ಹಿರಿಯ ಕಾಂಗ್ರೆಸ್ ನಾಯಕರ ಜೊತೆಗೂಡಿ ಭಿನ್ನಮತೀಯ ಶಾಸಕರನ್ನು ಭೇಟಿ ಮಾಡಿ ಚರ್ಚಿಸಲಿದ್ದಾರೆ, ಜೊತೆಗೆ ಕೆಪಿಸಿಸಿ ಅಧ್ಯಕ್ಷರ ಆಯ್ಕೆ ಸಂಬಂಧವೂ ಚರ್ಚೆ ನಡೆಯಲಿದೆ.
ಸಂಪುಟದಲ್ಲಿ ಸ್ಥಾನ ಸಿಗದಿದ್ದಕ್ಕೆ ಕೆಲವು ಶಾಸಕರು ಸಿಟ್ಟಾಗಿದ್ದಾರೆ, ಭಿನ್ನಾಭಿಪ್ರಾಯಗಳನ್ನು ಬಗೆಹರಿಸಿಕೊಳ್ಳಲು ಇನ್ನೂ ಸಮಯಾವಕಾಶವಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಹೇಳಿದ್ದಾರೆ. 
ಪಕ್ಷದ ಹಿತದೃಷ್ಟಿಯಿಂದ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ, ಪಕ್ಷದೊಳಗೆ ಯಾವುದೇ ರೀತಿಯ ಪಕ್ಷಪಾತ ನಡೆದಿಲ್ಲ,ಹೈಕಮಾಂಡ್ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತೇವೆ ಎಂದು ತಿಳಿಸಿದ್ದಾರೆ.
ಬುಧವಾರ ಕೂಡ ಅತೃಪ್ತ ಶಾಸಕರ ಬಣದ ಸಭೆಗಳು ನಡೆದಿದ್ದವು. ತನ್ವೀರ್ ಸೇಟ್, ಅಜಯ್ ಸಿಂಗ್, ಡಾ. ಸುಧಾಕರ್ ಸೇರಿದಂತೆ ಹಲವು ಶಾಸಕರು ಎಚ್ ಕೆ ಪಾಟೀಲ್ ನಿವಾಸಕ್ಕೆ ಭೇಟಿ ನೀಡಿ ಚರ್ಚಿಸಿದರು. ಶ್ಯಾಮನೂರು ಶಿವಶಂಕರಪ್ಪ ಅವರ ಬೆಂಬಲಿಗರು ಡಿಸಿಎಂ ಪರಮೇಶ್ವರ್ ಅವರ ಮನೆ ಮುಂದೆ ಪ್ರತಿಭಟನೆ ನಡೆಸಿದರು. 

Related Stories

No stories found.

Advertisement

X
Kannada Prabha
www.kannadaprabha.com