ರಾಜ್ಯ ಬಜೆಟ್ ಕುರಿತು ಸಮನ್ವಯ ಸಮಿತಿಯಲ್ಲಿ ಚರ್ಚಿಸಿ ನಿರ್ಧಾರ; ಡಿಸಿಎಂ ಪರಮೇಶ್ವರ

ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೊಸ ಬಜೆಟ್ ಮಂಡನೆ ಮಾಡುವುದು ವಾಡಿಕೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಪರೋಕ್ಷವಾಗಿ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ...
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್
ಬೆಂಗಳೂರು; ರಾಜ್ಯದಲ್ಲಿ ಹೊಸ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹೊಸ ಬಜೆಟ್ ಮಂಡನೆ ಮಾಡುವುದು ವಾಡಿಕೆ ಎಂದು ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹೇಳುವ ಮೂಲಕ ಪರೋಕ್ಷವಾಗಿ ತಮ್ಮದೇ ಪಕ್ಷದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೇಳಿಕೆಗೆ ಭಿನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. 
ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪ್ರಸ್ತುತ ಕಾಂಗ್ರೆಸ್ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಹೊಸ ಬಜೆಟ್ ಮಂಡಿಸಬೇಕಾ? ಇಲ್ಲಾ ಪೂರಕ ಬಜೆಟ್ ಮಂಡಿಸಬೇಕಾ? ಇಲ್ಲಾ ಪೂರಕ ಬಜೆಟ್ ಮಂಡಿಸಬೇಕಾ ಎನ್ನುವುದನ್ನು ಸಮನ್ಯವ ಸಮಿತಿ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. 
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಹೊಸ ಬಜೆಟ್ ಮಂಡಿಸುವುದಾಗಿ ಹೇಳುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೂರಕ ಬಜೆಟ್ ಮಂಡಿಸಿದರೆ ಸಾಕು ಎನ್ನುತ್ತಿದ್ದಾರಲ್ಲಾ ಎಂಬ ಪ್ರಶ್ನೆಗೆ ಉತ್ತರಿಸಿರುವ ಅವರು, ಸಾಮಾನ್ಯವಾಗಿ ಒಂದು ಸರ್ಕಾರ ಅಧಿಕಾರಾವಧಿ ಪೂರ್ಣಗೊಂಡ ಬಳಿಸ ಹೊಸ ಸರ್ಕಾರ ಅಧಿಕಾರಕ್ಕೆ ಬಂದಾಗ ಹೊಸ ಬಜೆಟ್ ಮಂಡಿಸುವುದು ವಾಡಿಕೆ. ತನ್ನದೇ ಆದ ಹೊಸ ಕಾರ್ಯಕ್ರಮಗಳನ್ನು ಘೋಷಣೆ ಮಾಡಬೇಕಾಗುತ್ತದೆ. ಆದರೆ, ಸಿದ್ದರಾಮಯ್ಯ ಅವರು ಯಾವ ಅರ್ಥದಲ್ಲಿ ಪೂರಕ ಬಜೆಟ್ ಕುರಿತು ಹೇಳಿಕೆ ನೀಡಿದ್ದಾರೋ ಗೊತ್ತಿಲ್ಲ. ಆ ಬಗ್ಗೆ ನಾನೇನೂ ಹೆಚ್ಚು ಮಾತನಾಡುವುದಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com