ರಾಜಕೀಯ

ವಿಧಾನಪರಿಷತ್ ಅಧ್ಯಕ್ಷ ಸ್ಥಾನದ ಮೇಲೆ ಜೆಡಿಎಸ್ ಕಣ್ಣು, ಬಿಟ್ಟುಕೊಡದ ಮನಸ್ಥಿತಿಯಲ್ಲಿ ಕಾಂಗ್ರೆಸ್!

ವಿಧಾನಪರಿಷತ್ ಅಧ್ಯಕ್ಷ ಸ್ಥಾನದ ಮೇಲೆ ಜೆಡಿಎಸ್ ಕಣ್ಣು, ಬಿಟ್ಟುಕೊಡದ ಮನಸ್ಥಿತಿಯಲ್ಲಿ ಕಾಂಗ್ರೆಸ್!
ಹೆಚ್ ಡಿ ಕುಮಾರಸ್ವಾಮಿ-ಸಿದ್ದರಾಮಯ್ಯ
Published On :
ಬೆಂಗಳೂರು: ಮೈತ್ರಿ ಸರ್ಕಾರದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವಿನ ಸಚಿವ ಸ್ಥಾನಗಳ ತಿಕ್ಕಾಟ ನಂತರ ಇದೀಗ ವಿಧಾನಪರಿಷತ್ ಅಧ್ಯಕ್ಷ ಸ್ಥಾನಕ್ಕಾಗಿ ಅಗ್ಗಜಗ್ಗಾಟ ಮುಂದುವರೆಯಲಿದೆ.
ಜೆಡಿಎಸ್ ಪಕ್ಷ ಸದ್ಯ ವಿಧಾನಪರಿಷತ್ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣೀಟ್ಟಿದ್ದು ಈ ಸ್ಥಾನವನ್ನು ಬಿಟ್ಟುಕೊಡುವ ಮನಸ್ಥಿತಿಯಲ್ಲಿ ಕಾಂಗ್ರೆಸ್ ಇಲ್ಲ. ಹೌದು ಜೆಡಿಎಸ್ ರಾಷ್ಟ್ರಾಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ಸಮನ್ವಯ ಸಮಿತಿಯ ಅಧ್ಯಕ್ಷ ಸಿದ್ದರಾಮಯ್ಯ ನಡುವೆ ಮತ್ತೊಂದು ಸುತ್ತಿನ ಅಗ್ಗಜಗ್ಗಾಟಕ್ಕೆ ಕಾರಣವಾಗಲಿದೆ. 
ವಿಧಾನಪರಿಷತ್ ಸಭಾಪತಿ ಡಿಹೆಚ್ ಶಂಕರಮೂರ್ತಿ ಅವರ ಅವಧಿ ಗುರುವಾರಕ್ಕೆ ಅಂತ್ಯವಾಗಿದ್ದು ಈ ಹಿನ್ನೆಲೆಯಲ್ಲಿ ಸಭಾಪತಿ ಹುದ್ದೆ ಮೇಲೆ ಜೆಡಿಎಸ್ ಕಣ್ಣಾಗಿದೆ. 75 ವಿಧಾನಪರಿಷತ್ ಸದಸ್ಯರ ಪೈಕಿ ಜೆಡಿಎಸ್ 14 ಸದಸ್ಯರನ್ನು ಹೊಂದಿದೆ. ಇನ್ನು ಕಾಂಗ್ರೆಸ್ 35 ಸದಸ್ಯರನ್ನು ಹೊಂದಿದ್ದು ವಿಧಾನಸಭೆ ಚುನಾವಣೆಯಲ್ಲಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿರುವ ಬಿಜೆಪಿ ಕೇವಲ 19 ಸ್ಥಾನಗಳನ್ನು ಹೊಂದಿದ್ದು ಮೂವರು ಪಕ್ಷೇತ್ತರ ಹಾಗೂ ನಾಲ್ಕು ಸ್ಥಾನಗಳನ್ನು ಇನ್ನು ತುಂಬಬೇಕಿದೆ. 
ವಿಧಾನಪರಿಷತ್ ಸಭಾಪತಿ ಹುದ್ದೆಯನ್ನು ಜೆಡಿಎಸ್ ಗೆ ಬಿಟ್ಟುಕೊಡುವುದಿಲ್ಲ ಎಂದು ಕಾಂಗ್ರೆಸ್ ನ ಹಿರಿಯ ಮುಖಂಡ ಮತ್ತು ಪರಿಷತ್ ಸದಸ್ಯರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದ್ದಾರೆ. ಕಾಂಗ್ರೆಸ್ 35 ಸದಸ್ಯರನ್ನು ಹೊಂದಿದ್ದು ಕೇವಲ 14 ಸದಸ್ಯರನ್ನು ಹೊಂದಿರುವ ಜೆಡಿಎಸ್ ಗೆ ಸಭಾಪತಿ ಹುದ್ದೆಯನ್ನು ಬಿಟ್ಟುಕೊಡುವುದಿಲ್ಲ. ಬಹುಶಃ ಸಭಾಪತಿ ಹುದ್ದೆ ಕಾಂಗ್ರೆಸ್ ತೆಗೆದುಕೊಳ್ಳಲಿದ್ದು ಉಪ ಸಭಾಪತಿ ಹುದ್ದೆಯನ್ನು ಜೆಡಿಎಸ್ ಗೆ ಬಿಟ್ಟುಕೊಡಬಹುದು ಎಂದು ಹೇಳಿದ್ದಾರೆ. 
ಇದಕ್ಕೆ ಜೆಡಿಎಸ್ ಸಹ ಪ್ರತಿಕ್ರಿಯಿಸಿದ್ದು ವಿಧಾನಸಭೆ ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್ ಗೆ ಬಿಟ್ಟುಕೊಟ್ಟಿದ್ದು ಆದ್ದರಿಂದ ವಿಧಾನಪರಿಷತ್ ಸಭಾಪತಿ ಹುದ್ದೆಯನ್ನು ಜೆಡಿಎಸ್ ನೀಡಬೇಕಿದೆ. ಅದರಂತೆ ಹಿರಿಯ ಸದಸ್ಯ ಬಸವರಾಜ್ ಹೊರಟ್ಟಿ ಅವರು ಮುಂದಿನ ಅಧ್ಯಕ್ಷರಾಗಲಿದ್ದಾರೆ ಎಂದು ಜೆಡಿಎಸ್ ನ ನಾಯಕರು ಹೇಳಿದ್ದಾರೆ. ದೇವೇಗೌಡರನ್ನು ಭೇಟಿಯಾದ ಹೊರಟ್ಟಿ ಅವರು ವಿಧಾನಪರಿಷತ್ ಚುನಾವಣೆ ಕುರಿತಂತೆ ಚರ್ಚಿಸಿದ್ದಾರೆ. ಮುಂದಿನ ದಿನಗಳಲ್ಲಿ ಹೊರಟ್ಟಿ ಅವರು ಮಧ್ಯಂತರ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲಿದ್ದು ಶಾಸಕರ ಬಜೆಟ್ ಅಧಿವೇಶನದಲ್ಲಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗುತ್ತಾರೆ ಎಂದು ಹೇಳಿದರು. 
ಬಸವರಾಜ್ ಹೊರಟ್ಟಿ ಅವರನ್ನು ಆಯ್ಕೆ ಮಾಡಲು ದೇವೇಗೌಡರು ಮುಂದಾಗಿದ್ದರೆ, ಅತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಆಪ್ತರಾದ ಎಸ್ ಆರ್ ಪಾಟೀಲ್ ಅವರನ್ನು ಗೆಲ್ಲಿಸಲು ಮುಂದಾಗಿದ್ದಾರೆ. ವಿಧಾನಸಭೆ ಚುನಾವಣೆ ನಂತರ ಎಸ್ ಆರ್ ಪಾಟೀಲ್ ಕೆಪಿಸಿಸಿ ಕಾರ್ಯಾಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.