ವಿಧಾನಸಭೆ ಚುನಾವಣೆ ಬಳಿಕ ಬಿಜೆಪಿ-ಆರ್'ಎಸ್ಎಸ್ ಮೊದಲ ಸಭೆ: ನಾಯಕರಿಂದ ಸೋಲಿನ ಪರಾಮರ್ಶೆ

ರಾಜ್ಯ ವಿಧಾನಸಬಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಭೇಟಿ ಮಾಡಿ ಶುಕ್ರವಾರ ಚರ್ಚೆ ನಡೆಸಿದ್ದಾರೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ರಾಜ್ಯ ವಿಧಾನಸಬಾ ಚುನಾವಣೆ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ನಾಯಕರು, ಸಂಘ ಪರಿವಾರದ ಮುಖಂಡರನ್ನು ಭೇಟಿ ಮಾಡಿ ಶುಕ್ರವಾರ ಚರ್ಚೆ ನಡೆಸಿದ್ದಾರೆ. 
ನಿನ್ನೆ ನಗರದ ಚಾಮರಾಜಪೇಟೆಯಲ್ಲಿನ ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್'ಎಸ್ಎಸ್) ಕಚೇರಿಗೆ ತೆರಳಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ, ಮಾಜಿ ಉಪ ಮುಖ್ಯಮಂತ್ರಿ ಆರ್. ಅಶೋಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆಯವರು ಸುಧೀರ್ಘ ಮಾತುಕೆತ ನಡೆಸಿದರು. 
ಸಭೆಯಲ್ಲಿ ಕರ್ನಾಟಕ ರಾಜ್ಯ ವಿಧಾನಸಬೆ ಚುನಾವಣೆ ಸೇರಿದಂತೆ ಹಲವು ವಿಚಾರಗಳ ಕುರಿತಂತೆ ಚರ್ಚೆ ನಡೆಸಲಾಯಿತು. ಸಂಘ ಪರಿವಾರದ ಅಡಿಯಲ್ಲಿ ಪ್ರತೀ 3 ತಿಂಗಳಿಗೊಮ್ಮೆ ಪಕ್ಷ ಇದೇ ರೀತಿಯ ಸಭೆಯನ್ನು ನಡೆಸಲಿದೆ. ಚುನಾವಣೆ ಫಲಿತಾಂಶ ಹಾಗೂ 2019 ಲೋಕಸಭಾ ಚುನಾವಣೆ ಕುರಿತು ಸಭೆಯಲ್ಲಿ ಚರ್ಚೆ ನಡೆಸಲಾಯಿತು ಎಂದು ಬಿಜೆಪಿ ನಾಯಕರೊಬ್ಬರು ಹೇಳಿದ್ದಾರೆ. 
224 ವಿಧಾನಸಭಾ ಕ್ಷೇತ್ರಗಳಲ್ಲಿ 104 ಸ್ಥಾನಗಳನ್ನು ಗೆದ್ದ ಏಕೈಕ ಅತಿದೊಡ್ಡ ಪಕ್ಷವಾಗಿ ಬಿಜೆಪಿ ಹೊರಹೊಮ್ಮಿದೆ. ಟಿಕೆಟ್ ನೀಡುವಲ್ಲಿ ಆದ ತಪ್ಪು ಗ್ರಹಿಕೆಗಳೇ ಚುನಾವಣೆಯಲ್ಲಿ ಸೋಲಲು ಕಾರಣವಾಯಿತು ಎಂದು ಪಕ್ಷದ ನಾಯಕರೊಬ್ಬರು ಹೇಳಿದ್ದಾರೆ. 
ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರಿಗೆ ಮುಕ್ತ ಕೈ ನೀಡಿದ್ದರೆ, ಅದು ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಾಗುತ್ತಿತ್ತು ಎಂದು ಮೂಲಗಳು ಮಾಹಿತಿ ನೀಡಿದೆ. 
ರಾಜ್ಯ ಚುನಾವಣೆಯಷ್ಟೇ ಅಲ್ಲದೆ ಸಭೆಯಲ್ಲಿ 2019 ಲೋಕಸಭಾ ಚುನಾವಣೆ ಕುರಿತಂತೆಯೂ ಚರ್ಚೆ ನಡೆಸಲಾಗಿದೆ. ರಾಜ್ಯದಲ್ಲಿ ಈಗಾಗಲೇ ಜೆಡಿಎಸ್ ಮತ್ತು ಕಾಂಗ್ರೆಸ್ ನೇತೃತ್ವದ ಸಮ್ಮಿಶ್ರ ಸರ್ಕಾರ ಅಸ್ತಿತ್ವದಲ್ಲಿದ್ದು, ಈ ಎರಡೂ ಪಕ್ಷಗಳು ಒಟ್ಟಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದೆ. ಎರಡೂ ಪಕ್ಷಗಳು ಒಟ್ಟಾಗಿ ಚುನಾವಣೆ ಎದುರಿಸುವುದರಿಂದ ಅದು ಬಿಜೆಪಿಗೆ ಸವಾಲು ಒಡ್ಡಿದಂತಾಗುತ್ತದೆ. ಈ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣೆಯ ರಣತಂತ್ರ ರೂಪಿಸಬೇಕು ಎಂಬ ನಿಲುವಿಗೆ ಬಿಜೆಪಿ ನಾಯಕರು ಬಂದಿದ್ದಾರೆಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com