ಹಿಂದಿನ ಸರ್ಕಾರದಲ್ಲಿ ಶಾಸಕರಾಗಿದ್ದ ವೆಂಕಟೇಶ್ ಕಾಮಗಾರಿಯೊಂದಕ್ಕೆ ಭೂಮಿ ಪೂಜೆ ನೆರವೇರಿಸಿದ್ದರು., ಆದರೆ ಈಗ ಆಯ್ಕೆಯಾಗಿರುವ ಜೆಡಿಎಸ್ ಶಾಸಕ ಕೆ. ಮಹಾದೇವ್ ಅದೇ ಕಾಮಗಾರಿಗೆ ಮತ್ತೆ ಭೂಮಿ ಪೂಜೆ ನೆರವೇರಿಸಿದ್ದನ್ನು ವಿರೋಧಿಸಿ ಪಿರಿಯಾಪಟ್ಚಣ ಕಾಂಗ್ರೆಸ್ ಕಾರ್ಯಕರ್ತರು ಬೆಳ್ತೂರಿನಲ್ಲಿ ಪ್ರತಿಭಟನೆ ನಡೆಸಿದರು, ಹಿಂದಿನ ಶಾಸಕರ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಕ್ರಮಗಳನ್ನು ಮತ್ತೆ ಮಾಡಲು ಹೊರಟಿದ್ದು ಎರಡು ಪಕ್ಷಗಳ ಘರ್ಷಣೆಗೆ ಕಾರಣವಾಗಿತ್ತು., ಪೊಲೀಸರ ಮಧ್ಯಸ್ಥಿಕೆಯಿಂದಾಗಿ ಗ್ರಾಮದಲ್ಲಿ ನಿರ್ಮಾಣವಾಗಿದ್ದ ಉದ್ವಿಗ್ನ ಪರಿಸ್ಥಿತಿ ಸುಧಾರಿಸಿದೆ.