ದೋಸ್ತಿ ಸರ್ಕಾರದಲ್ಲಿ ಭಿನ್ನಮತ: ಬಿಜಿಪಿಯಿಂದ ಕಾದು ನೋಡುವ ತಂತ್ರ

ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತಕ್ಷಣಕ್ಕೆ...
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
Updated on: 
ಬೆಂಗಳೂರು: ಬಜೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಜೆಡಿಎಸ್ - ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಭಿನ್ನಮತ ಸ್ಫೋಟಗೊಂಡಿದ್ದು, ತಕ್ಷಣಕ್ಕೆ ಅದರ ಲಾಭ ಪಡೆಯದಿರಲು ಬಿಜೆಪಿ ನಿರ್ಧರಿಸಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮಂಗಳವಾರ ಹೇಳಿದ್ದಾರೆ.
ಜೆಡಿಎಸ್ - ಕಾಂಗ್ರೆಸ್ ನಾಯಕರ ಮಧ್ಯೆ ಭಿನ್ನಮತ ಇದೆ. ಆದರೆ ಯಾವುದರ ಬಗ್ಗೆಯೂ ಸ್ಪಷ್ಟತೆ ಇಲ್ಲ. ಸಂಪೂರ್ಣ ಗೊಂದಲಮಯವಾಗಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದು ಹೇಳಿದರೆ, ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮತ್ತೊಂದು ಹೇಳುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ನಾವು ಮಧ್ಯ ಪ್ರವೇಶಿಸಲು ಬರುವುದಿಲ್ಲ. ದೋಸ್ತಿ ಸರ್ಕಾರದ ಭಿನ್ನಮತದ ಬಗ್ಗೆ ಯಾವುದೇ ಹೇಳಿಕೆ ನೀಡದಂತೆ ತಾವು ತಮ್ಮ ನಾಯಕರಿಗೆ ಮನವಿ ಮಾಡಿರುವುದಾಗಿ ಬಿಎಸ್ ವೈ ತಿಳಿಸಿದ್ದಾರೆ.
ಸಮ್ಮಿಶ್ರ ಸರ್ಕಾರಕ್ಕೆ ಬಜೆಟ್ ಅಧಿವೇಶನದ ಬಗ್ಗೆಯೇ ಗೊಂದಲಗಳಿವೆ. ಬಜೆಟ್ ಅಧಿವೇಶನ ಆರಂಭವಾಗುವ 15 ದಿನ ಮುಂಚಿತವಾಗಿಯೇ ಪ್ರತಿಪಕ್ಷಗಳ ಗಮನಕ್ಕೆ ತರುವುದು ಸಂಪ್ರದಾಯ. ಆದರೆ ಅಧಿವೇಶನದ ಬಗ್ಗೆ ಇದುವರೆಗೂ ನಮಗೆ ಯಾವುದೇ ಮಾಹಿತಿ ಇಲ್ಲ. ಹೀಗಾಗಿ ಪ್ರಶ್ನೆಗಳನ್ನು ಸಿದ್ಧಪಡಿಸಲು ನಮಗೆ ಅತ್ಯಂತ ಕಡಿಮೆ ಕಾಲವಕಾಶ ನೀಡಿದಂತಾಗುತ್ತದೆ ಎಂದು ಮಾಜಿ ಸಿಎಂ ಹೇಳಿದ್ದಾರೆ.
ಯಡಿಯೂರಪ್ಪ ಅವರು ನಿನ್ನೆ ದಿಢೀರ್ ಅಹಮದಾಹಾದ್ ಗೆ ತೆರಳಿ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರನ್ನು ಭೇಟಿ ಮಾಡಿದ್ದು, ಸಮ್ಮಿಶ್ರ ಸರ್ಕಾರ ಉರುಳಿಸುವ ಚಿಂತನೆ ನಡೆದಿದೆ ಎಂಬ ಮಾಧ್ಯಮಗಳ ವರದಿ ಬಗ್ಗೆ ಪ್ರತಿಕ್ರಿಯಿಸಿದ ಬಿಎಸ್ ವೈ, ಜೂನ್ 29ರಂದು ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆಗೆ ಆಹ್ವಾನ ನೀಡುವುದಕ್ಕಾಗಿ ನಾನು ಅಹಮದಾಬಾದ್ ಗೆ ತೆರಳಿದ್ದೆ ಎಂದು ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com