ಬೆಂಗಳೂರು: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಧೀರ್ಘಾವದಿ ಬಾಳಿಕೆ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆ ದೋಸ್ತಿ ಸರ್ಕಾರಕ್ಕೆ ಮತ್ತೊಮ್ಮೆ ಇರಿಸು ಮುರಿಸು ಉಂಟು ಮಾಡಿದೆ.
ಲೋಕಸಭೆ ಚುನಾವಣೆ ನಂತರ ಸಮ್ಮಿಶ್ರ ಸರ್ಕಾರ ಉಳಿಯುವುದು ಕಷ್ಟ, ಐದು ವರ್ಷಗಳ ಪೂರ್ಣಾವಧಿ ಸರ್ಕಾರ ನೀಡುವುದು ಸಾಧ್ಯವಿಲ್ಲ, ನೋಡೋಣ ಲೋಕಸಭೆ ಚುನಾವಣೆ ಮುಗಿಯಲಿ, ಆನಂತರ ಏನೇನು ಬೆಳವಣಿಗೆಗಳು ಆಗುತ್ತವೆಯೋ ಎಂಬುದನ್ನು ಕಾದು ನೋಡೋಣ ಎಂದು ಹೇಳಿರುವ ವಿಡಿಯೋ ವೈರ್ ಆಗಿದೆ.
ಈ ವಿಡಿಯೋವನ್ನು ಸ್ಥಳೀಯ ಸುದ್ದಿ ವಾಹಿನಿಗಳು ಪ್ರಸಾರ ಮಾಡಿವೆ. ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರಾಗಿರುವ ಸಿದ್ದರಾಮಯ್ಯ ಧರ್ಮಸ್ಥಳದಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ವೇಳೆ ತಮ್ಮ ಆಪ್ತರ ಜೊತೆ ಮಾತನಾಡಿರುವ ವಿಡಿಯೋ ಎಲ್ಲೆಡೆ ಹರಿದಾಡುತ್ತಿದೆ.
ಇನ್ನೂ ಎರಡು ದಿನಗಳ ಹಿಂದೆ ರಾಜ್ಯ ಬಜೆಟ್ ಸಂಬಂಧ ಮಾತನಾಡಿದ್ದ ಸಿದ್ದರಾಮಯ್ಯ ಮತ್ತೆ ಹೊಸ ಬಜೆಟ್ ಮಂಡಿಸುವ ಅಗತ್ಯವೇನಿತ್ತು, ಪೂರಕ ಬಜೆಟ್ ಮಂಡಿಸಿದ್ದರೇ ಸಾಕಾಗಿತ್ತು ಎಂದು ಅಸಮಾಧಾನ ವ್ಯಕ್ತ ಪಡಿಸಿರುವ ವಿಡಿಯೋ ಕೂಡ ವೈರಲ್ ಆಗಿತ್ತು.
ಇನ್ನೂ ಈ ವಿಡಿಯೊ ಹೊರಬಿದ್ದಿರುವ ಬಗ್ಗೆ ಪ್ರತಿಕ್ರಿಯಿಸಿರುವ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್, ಸಮ್ಮಿಶ್ರ ಸರ್ಕಾರ 5 ವರ್ಷ ಪೂರ್ಣ ಅಧಿಕಾರ ನಡೆಸಲಿದೆ. ಜೆಡಿಎಸ್ ಗೆ ಕೊಟ್ಟ ಮಾತಿಗೆ ಬದ್ಧರಾಗಿದ್ದೇವೆ ಎಂದರು. ನೀವು ಪದ್ ಪದೇ ಎಷ್ಟ್ ಬಾರಿ ಕೇಳಿದರ ನನ್ನ ಉತ್ತರ ಇದೇ ಆಗಿರುತ್ತೆ, ಸಮ್ಮಿಶ್ರ ಸರ್ಕಾರ ಐದು ವರ್ಷ ಪೂರ್ಣ ಗೊಳಿಸುವುದು ಖಚಿತ ಎಂದು ಭರವಸೆ ವ್ಯಕ್ತ ಪಡಿಸಿದ್ದಾರೆ.