ಕಾಂಗ್ರೆಸ್ ಸಚಿವರ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು.ಸಂಪುಟ ವಿಸ್ತರಣೆ ಸಂಬಂಧ ನಮ್ಮ ಹಂತದಲ್ಲಿ ಯಾವುದೇ ಚರ್ಚೆ ನಡೆದಿಲ್ಲ. ಲೋಕಸಭೆ ರಣನೀತಿ ಸಂಬಂಧ ಚರ್ಚೆ ನಡೆಸಲಾಗಿದೆ. ಬಾಕಿ ಇರುವ ಆರು ಸಚಿವ ಸ್ಥಾನಗಳನ್ನು ಶೀಘ್ರದಲ್ಲಿಯೇ ಭರ್ತಿ ಮಾಡಲಾಗುವುದು. ಅದಕ್ಕೂ ಮುಂಚಿತವಾಗಿ ನಿಗಮ, ಮಂಡಳಿಗಳಿಗೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರನ್ನು ನೇಮಕ ಮಾಡಲಾಗುವುದು ಎಂದು ಹೇಳಿದರು.