ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಕಾರಣಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಜೊತೆ ಮೈತ್ರಿ: ದೇವೇಗೌಡ

ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ ...
ದೇವೇಗೌಡ
ದೇವೇಗೌಡ
ನವದೆಹಲಿ: ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಸಣ್ಣಪುಟ್ಟ ಸಮಸ್ಯೆಗಳಿದ್ದರೆ ಉಭಯ ಪಕ್ಷಗಳ ಮುಖಂಡರು ಚರ್ಚಿಸಿ ಬಗೆಹರಿಸಿಕೊಳ್ಳುತ್ತಾರೆ ಎಂದು ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಹೇಳಿದ್ದಾರೆ.
ನವದೆಹಲಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಸಮ್ಮಿಶ್ರ ಸರ್ಕಾರದ ಬಗ್ಗೆ ಸಮನ್ವಯ ಸಮಿತಿ ಅಧ್ಯಕ್ಷರಾದ ಸಿದ್ದರಾಮಯ್ಯನವರ ಹೇಳಿಕೆಯ ಬಗ್ಗೆ ಅಷ್ಟು ಮಹತ್ವ ಕೊಡುವುದು ಬೇಡ. ವ್ಯತ್ಯಾಸಗಳು ಕಂಡುಬಂದಲ್ಲಿ ಪಕ್ಷದ ಮುಖಂಡರು ನಿಭಾಯಿಸಿಕೊಂಡು ಹೋಗುತ್ತಾರೆ. ಸರ್ಕಾರದ ಸ್ಥಿರತೆಯ ಬಗ್ಗೆ ಯಾವುದೇ ಊಹಾಪೋಹ ಅಗತ್ಯವಿಲ್ಲ ಎಂದು ಹೇಳಿದರು. 
ರಾಷ್ಟ್ರ ರಾಜಕಾರಣದ ಬಗ್ಗೆ ಮಾತನಾಡಿದ ದೇವೇಗೌಡರು, ಬಿಜೆಪಿ ಪಕ್ಷ ಈಗಾಗಲೇ ಚುನಾವಣೆಗೆ ಸಜ್ಜಾಗುತ್ತಿರುವುದನ್ನು ಗಮನಿಸಿದರೆ ನವೆಂಬರ್ ಅಥವಾ ಡಿಸೆಂಬರ್‍ನಲ್ಲಿ ಲೋಕಸಭೆ ಚುನಾವಣೆ ನಡೆಯುವ ಸಾಧ್ಯತೆ ಕಂಡುಬರುತ್ತಿದೆ. ಬಹುಶಃ ಈ ಸಂಸತ್ ಅಧಿವೇಶನ ಕೊನೆಯ ಅಧಿವೇಶನವಾಗಬಹುದು ಎಂದು ಹೇಳಿದರು.
ರಾಜ್ಯದಲ್ಲಿ ಬಿಜೆಪಿಯನ್ನು ಅಧಿಕಾರದಿಂದ ದೂರವಿಡಬೇಕೆಂಬ ಒಂದೇ ಕಾರಣಕ್ಕಾಗಿ ನಮ್ಮಲ್ಲಿರುವ ಭಿನ್ನಾಭಿಪ್ರಾಯಗಳನ್ನು ಮರೆತು ಮೈತ್ರಿ ಮಾಡಿಕೊಂಡಿದ್ದೇವೆ. ಜನರ ನಿರೀಕ್ಷೆಗೆ ತಕ್ಕಂತೆ ಆಡಳಿತ ನಡೆಸುವುದು ನಮ್ಮ ಗುರಿಯಾಗಿದೆ. ಗೊಂದಲಗಳಿದ್ದರೆ ಎಐಸಿಸಿ ಅಧ್ಯಕ್ಷರಾದ ರಾಹುಲ್ ಗಾಂಧಿ ಅವರು ಪರಿಹರಿಸುತ್ತಾರೆ ಎಂಬ ವಿಶ್ವಾಸ ನಮಗಿದೆ ಎಂದರು

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com