ಕೇಂದ್ರ ಸಚಿವ ಅನಂತ್ ಕುಮಾರ್
ರಾಜಕೀಯ
ಕೆಲ ದನಗಳು ಸೀದಾ ಹೋದರೆ, ಕೆಲವು ಅಡ್ಡಾದಿಡ್ಡಿ ಹೋಗುತ್ತವೆ: ಹೆಗಡೆಗೆ ಅನಂತ್ ಕುಮಾರ್ ಟಾಂಗ್
ರಾಜ್ಯದ ಕೆಲ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಇದು ಸರಿಯಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಮತ್ತೊಬ್ಬ ಕೇಂದ್ರ ಸಚಿವ ಅನಂತ್ ಕುಮಾರ ಹೆಗಡೆ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ...
ಬೆಂಗಳೂರು: ರಾಜ್ಯದ ಕೆಲ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಇದು ಸರಿಯಲ್ಲ ಎಂದು ಕೇಂದ್ರ ಸಚಿವ ಅನಂತ್ ಕುಮಾರ್ ಅವರು ಮತ್ತೊಬ್ಬ ಕೇಂದ್ರ ಸಚಿವ ಅನಂತ್ ಕುಮಾರ ಹೆಗಡೆ ವಿರುದ್ಧ ಪರೋಕ್ಷವಾಗಿ ಕಿಡಿಕಾರಿದ್ದಾರೆ.
ನಗರದಲ್ಲಿ ನಡೆದ ಬಿಜೆಪಿ ರಾಜ್ಯಕಾರಿಣಿ ಸಭೆಯ ಸಮಾರೋಪ ಭಾಷಣದಲ್ಲಿ ಮಾತನಾಡಿರುವ ಅವರು, ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ವಿರುದ್ಧ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.
ರಾಜ್ಯ ಕೆಲ ಬಿಜೆಪಿ ನಾಯಕರು ಬಾಯಿಗೆ ಬಂದಂತೆ ಮಾತನಾಡುವುದನ್ನು ಬಿಡಬೇಕು. ಹಳ್ಳಿ ಕಡೆ ದನಗಳು ಮೇಯಲು ಹೋಗುತ್ತವೆ. ಕೆಲವು ಸರಿಯಾದ ದಾರಿಯಲ್ಲಿ ಸಾಗಿದರೆ, ಇನ್ನು ಕೆಲ ದನಗಳು ಅಡ್ಡಾದಿಡ್ಡಿ ಮಾರ್ಗ ಅನುಸರಿಸುತ್ತವೆ. ಅದೇ ರೀತಿ ಪಕ್ಷದಲ್ಲಿಯೂ ಇತಿ ಮಿತಿ ಮೀರಿ ಬಾಯಿಗೆ ಬಂದಂತೆ ಪ್ರತಿಕ್ರಿಯೆ ನೀಡುತ್ತಿದ್ದಾರೆಂದು ಯಾರ ಹೆಸರು ಪ್ರಸ್ತಾಪ ಮಾಡದೆಯೇ ಖಾರವಾಗಿ ಹೇಳಿದ್ದಾರೆ.
ಇದೇ ವೇಳೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಅಮೆರಿಕಾ ಅಧ್ಯಕ್ಷ ಡೊನಾಲ್ಟ್ ಟ್ರಂಪ್ ಎಲ್ಲಿಯೋ ಮಾಡನಾಡಿದ್ದಕ್ಕೆ ನಾವು ಪ್ರತಿಕ್ರಿಯೆ ನೀಡಿದರೆ ಹೇಗಿರುತ್ತದೆಯೋ ಅಷ್ಟೇ ಇವರ ಮಾತು ಅಪ್ರಸ್ತುತ ಎಂದು ತಿಳಿಸಿದ್ದಾರೆ.
ಲೋಕಸಭೆಯಲ್ಲಿ ಬಿಜೆಪಿಗೆ 300ಕ್ಕೂ ಸ್ಥಾನ ಗೆಲ್ಲುವ ನಿರೀಕ್ಷೆಗಳಿದ್ದು, ಪಕ್ಷದ ನಿಲುವು, ಮಿತಿ ಮೀರಿ ಮಾತನಾಡುವುದನ್ನು ನಾಯಕರು ಸ್ವಯಂ ನಿಯಂತ್ರಣ ಹಾಕಿಕೊಳ್ಳಬೇಕಿದೆ ಎಂದು ಎಚ್ಚರಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ