ರಾಜರಾಜೇಶ್ವರಿ ನಗರದಿಂದ ಪ್ರಜ್ವಲ್ ರೇವಣ್ಣ ಸ್ಪರ್ಧಿಸುವ ಕುರಿತು ಇಂದು ಮೈಸೂರಿನಲ್ಲಿ ವರದಿಗಾರರಿಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ಪ್ರಜ್ವಲ್ ರೇವಣ್ಣ ಟಿಕೆಟ್ ಬೇಕು ಅಂತ ಅಪೇಕ್ಷ ಪಡುವುದರಲ್ಲಿ ಯಾವುದೇ ತಪ್ಪಿಲ್ಲ. ರಾಜರಾಜೇಶ್ವರಿ ನಗರದಲ್ಲಿ ಇನ್ನು ಅಭ್ಯರ್ಥಿ ಫೈನಲ್ ಆಗಿಲ್ಲ. ಹಾಗಾಗಿ ಅವರು ಟಿಕೆಟ್ ಕೇಳುತ್ತಿದ್ದಾರೆ. ಆ ಬಗ್ಗೆ ಪಕ್ಷದ ಒಳಗೆ ಅಂತಿಮ ನಿರ್ಧಾರ ಕೈಗೊಳ್ಳುತ್ತೇವೆ. ಪಕ್ಷದಲ್ಲಿ ಯಾರು ಬೇಕಾದರೂ ಟಿಕೆಟ್ ಕೇಳಬಹುದು. ಅವರಿಗೆ ಗೆಲ್ಲುವ ಸಾಮರ್ಥ್ಯವಿದ್ದರೆ ಪಕ್ಷ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದರು.