ಬೆಂಗಳೂರು: ನೈಸ್ ಸಂಸ್ಥೆಯ ಮುಖ್ಯಸ್ಥ ಹಾಗೂ ಕರ್ನಾಟಕ ಮಕ್ಕಳ ಪಕ್ಷದ ಶಾಸಕ ಅಶೋಕ್ ಖೇಣಿ ಇಂದು ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ರಾಜ್ಯಾಧ್ಯಕ್ಷ ಜಿ. ಪರಮೇಶ್ವರ್, ಇಂಧನ ಸಚಿವ ಡಿಕೆ ಶಿವಕುಮಾರ್ ಅವರ ಸಮ್ಮುಖದಲ್ಲಿ ಅಶೋಕ್ ಖೇಣಿ ಕಾಂಗ್ರೆಸ್ ಗೆ ಸೇರ್ಪಡೆಗೊಂಡರು.
ಕಳೆದ ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕರ್ನಾಟಕ ಮಕ್ಕಳ ಪಕ್ಷ ಸ್ಥಾಪಿಸಿ ಕಣಕ್ಕಿಳಿದಿದ್ದ ಅಶೋಕ್ ಖೇಣಿ ಜೆಡಿಎಸ್ ನ ಬಂಡೆಪ್ಪ ಕಾಶಂಪೂರ್ ಅವರನ್ನು ಸೋಲಿಸಿ ವಿಧಾನಸಭೆಗೆ ಆಯ್ಕೆಯಾಗಿದ್ದರು.