ಬೆಂಗಳೂರು: ರಾಜ್ಯಸಬಾ ಚುನಾವಣೆಗೆ ಜೆಡಿ(ಎಸ್) ಅಭ್ಯರ್ಥಿಯ ಆಯ್ಕೆ ಅಂತಿಮಗೊಂಡಿದೆ. ರಾಜ್ಯಸಭೆ ಚುನಾವಣೆಯ ಪಕ್ಷದ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಶುಕ್ರವಾರ ನಾಮಪತ್ರ ಸಲ್ಲಿಸಿದ್ದಾರೆ.
ಜೆಡಿ(ಎಸ್) ರಾಷ್ಟ್ರೀಯ ಮಹಾ ಪ್ರಧಾನಕಾರ್ಯದರ್ಶಿಆಗಿರುವ ಫಾರೂಕ್ ಮಂಗಳೂರು ಮೂಲದ ಕೈಗಾರಿಕೋದ್ಯಮಿ ಸಹ ಆಗಿದ್ದು ಚುನಾವಣಾಧಿಕಾರಿಯಾಗಿರುವ ವಿಧಾನಸಭೆ ಕಾರ್ಯದರ್ಶಿ ಎಸ್.ಮೂರ್ತಿ ಅವರಿಗೆ ನಾಮಪತ್ರ ಸಲ್ಲಿಸಿದ್ದಾರೆ.
ಅಭ್ಯರ್ಥಿ ನಾಮಪತ್ರದ ಸೂಚಕವಾಗಿ ಪಕ್ಷದ ನಾಯಕರುಗಳಾದ ನಾಯಕ ಎಚ್.ಡಿ. ಕುಮಾರಸ್ವಾಮಿ, ಎಚ್.ಡಿ.ರೇವಣ್ಣ, ಬಾಲಕೃಷ್ಣ, ಎಚ್.ಕೆ.ಕುಮಾರಸ್ವಾಮಿ, ಎಂ.ಟಿ.ಕೃಷ್ಣಪ್ಪ ಇನ್ನೂ ಮೊದಲಾದ ಹತ್ತು ಮಂದಿ ಶಾಸಕರು ಸಹಿ ಹಾಕಿದ್ದಾರೆ.
ಕಳೆದ ಬಾರಿ ಸಹ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಫಾರೂಕ್ ತಾವು ಪರಾಜಯ ಅನುಭವಿಸಿದ್ದರು. .ಇದೀಗ ಮತ್ತೆ ನಾಮಪತ್ರ ಸಲ್ಲಿಸಿ ಚುನಾವಣೆಗೆ ಸ್ಪರ್ಧೆ ನಡೆಸುತ್ತಿದ್ದಾರೆ.
ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಅಭ್ಯರ್ಥಿ ಆಯ್ಕೆ ಸಂಬಂಧ ಮಾರ್ಚ್ 23ರಂದು ಚುನಾವಣೆ ನಡೆಯುತ್ತಿದ್ದು ನಾಮಪತ್ರ ಸಲ್ಲಿಸಲು ಸೋಮವಾರ ಕಡೆಯ ದಿನವಾಗಿದೆ.
ಇನ್ನು ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಹಾಗೂ ಬಿಜೆಪಿ ರಾಜ್ಯಸಭೆಗಾಗಿ ತಮ್ಮ ಅಭ್ಯರ್ಥಿಗಳಾರು ಎನ್ನುವುದನ್ನು ಇನ್ನೂ ಪ್ರಕಟಿಸಿಲ್ಲ.