ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ: ಯಡ್ಯೂರಪ್ಪ ಆಗ್ರಹ

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಹೀಗಾಗಿ ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ...
ಯಡಿಯೂರಪ್ಪ
ಯಡಿಯೂರಪ್ಪ
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ, ಹೀಗಾಗಿ ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೆ ತರಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್ ಯಡಿಯೂರಪ್ಪ ಆಗ್ರಹಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಶಾಸಕ ಹ್ಯಾರಿಸ್ ಪುತ್ರನ ಗೂಂಡಾ ವರ್ತನೆ ಹಾಗೂ ಲೋಕಾಯುಕ್ತ ನ್ಯಾಯಮೂರ್ತಿಗಳಿಗೆ ಚಾಕು ಇರಿತ ಪ್ರಕರಣಗಳಿಂದ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿರುವುದನ್ನು ತೋರಿಸುತ್ತದೆ, ಅತ್ಯಾಚರ ಸಂಖ್ಯೆಗಳು ಹೆಚ್ಚುತ್ತಿವೆ,  ದರೋಡೆ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ಆರೋಪಿಸಿದ್ದಾರೆ.
ಬಿಜೆಪಿ ಮುಖಂಡರು ರಾಜ್ಯಪಾಲ ವಜೂಬಾಯಿ ವಾಲಾ ಅವರನ್ನು ಭೇಟಿ ಮಾಡಿ, ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಹೇರುವಂತೆ ಶಿಫಾರಸ್ಸು ಮಾಡುವಂತೆ ಮನವಿ ಮಾಡುವುದಾಗಿ ತಿಳಿಸಿದ್ದಾರೆ.
ಕಾಂಗ್ರೆಸ್ ಮುಖಂಡರ ಮಕ್ಕಳ ಗೂಂಡಾಗಿರಿ ನೋಡಿಕೊಂಡು ಸಿಎಂ ಸಿದ್ದರಾಮಯ್ಯ ಮತ್ತು ಗೃಹ ಸಚಿವ ರಾಮಲಿಂಗಾ ರೆಡ್ಡಿ  ಜಾಣ ಕುರುಡುತನ ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದ್ದಾರೆ. ಎಸಿಬಿ ರಚನೆ ಮಾಡುವ ಮೂಲಕ ಲೋಕಾಯುಕ್ತ ಸಂಸ್ಥೆಯನ್ನು ಕಾಂಗ್ರೆಸ್ ಬಲಹೀನಗೊಳಿಸಿದೆ, ಎಸಿಬಿ ಮೂಲಕ ತಮ್ಮ ರಾಜಕೀಯ ವೈರಿಗಳ ಮೇಲೆ ಸೇಡು ತೀರಿಸಿಕೊಳ್ಳುತ್ತಿದೆ ಎಂದು ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com