ಪ್ರತ್ಯೇಕ ಧರ್ಮ ವಿಚಾರ ಸಿಎಂ ಸಿದ್ದರಾಮಯ್ಯಗೆ ತಿರುಬಾಣವಾಗಲಿದೆ: ಬಿ.ಎಸ್.ಯಡಿಯೂರಪ್ಪ

ಲಿಂಗಾಯತ ಹಾಗೂ ವೀರಶೈವ ಪ್ರತ್ಯೇಕ ಧರ್ಮ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ...
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ
Updated on
ಬೆಂಗಳೂರು: ಲಿಂಗಾಯತ ಹಾಗೂ ವೀರಶೈವ ಪ್ರತ್ಯೇಕ ಧರ್ಮ ವಿಚಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಶುಕ್ರವಾರ ಹೇಳಿದ್ದಾರೆ. 
ರಾಜ್ಯ ರಾಜಕೀಯ ಹಾಗೂ ಧಾರ್ಮಿಕ ವಲಯದಲ್ಲಿ ಕೋಲಾಹಲ ಎಬ್ಬಿಸಿದ್ದ ಲಿಂಗಾಯತ ಸ್ವತಂತ್ರ ಧರ್ಮದ ವಿಚಾರ ಇದೀಗ ರಾಜ್ಯ ಸಚಿವ ಸಂಪುಟದೊಳಗೂ ಕೋಲಾಹಲ ಸೃಷ್ಟಿಸಿದೆ. ಧರ್ಮ ಸೂಕ್ಷ್ಮದೊಳಗೆ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ಪಾಲಿಗೆ ಈ ವಿಚಾರ ನುಂಗಲೂ ಆಗದೆ ಉಗಳಲೂ ಆಗದ ಬಿಸಿತುಪ್ಪವಾಗಿ ಪರಿಣಮಿಸಿದೆ. 
ವಿಧಾನಸಭೆ ಚುನಾವಣೆಗೂ ಮುನ್ನ ಲಿಂಗಾಯತರಿಗೆ ಧಾರ್ಮಿಕ ಅಲ್ಪಸಂಖ್ಯಾತ ಸ್ಥಾನಮಾನ ನೀಡವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಿ ಜವಾಬ್ದಾರಿ ಕಳೆದುಕೊಳ್ಳುವ ಲೆಕ್ಕಾಚಾರದಲ್ಲಿದ್ದ ಸಿದ್ದರಾಮಯ್ಯ ಅವರಿಗೆ ಈ ಬೆಳವಣಿಗೆ ತಲೆನೋವು ಸೃಷ್ಟಿಸಿದೆ. 
ಲಿಂಗಾಯತ ಸ್ವತಂತ್ರ ಧರ್ಮದ ಬೇಡಿಕೆ ಸಂಬಂಧ ಗುರುವಾರ ಸಚಿವ ಸಂಪುಟ ಸಭೆ ನಡೆಸಿತ್ತು. ಸುಮಾರು ಮೂರುವರೆ ತಾಸಿನ ಸಭೆಯಲ್ಲಿ ಒಮ್ಮತಾಭಿಪ್ರಾಯಾ ಬದಲು ಭಿನ್ನಾಭಿಪ್ರಾಯ ವಿಸ್ತರಣೆಯಾಗಿದೆ. ಸಮುದಾಯದ ಸಚಿವರಲ್ಲ ಪರ ವಿರೋಧಿ ಗುಂಪುಗಳಿಂದಾಗಿ ಸಂಪುಟ ಮಾ.14ರ ಸಂಪುಟದಲ್ಲೂ ಸರ್ವಸಮ್ಮದ ತೀರ್ಮಾನಕ್ಕೆ ಬರುವುದ ಅನುಮಾನಕ್ಕೆ ಎಡೆಮಾಡಿಕೊಟ್ಚಿದೆ. 
ಈ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಯಡಿಯೂರಪ್ಪ ಅವರು, ಇದು ಕೇವಲ ಆರಂಭವಷ್ಟೇ... ಮುಂದೆ ಏನಾಗುತ್ತದೆ ಎಂಬುದನ್ನು ಕಾದು ನೋಡಿ. ತಮ್ಮ ರಾಜಕೀಯ ಲಾಭಕ್ಕಾಗಿ ಸಮುದಾಯಗಳನ್ನು ವಿಭಜನೆ ಮಾಡಲು ಯತ್ನ ನಡೆಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ವಿಚಾರ ತಿರುಗುಬಾಣವಾಗಲಿದೆ ಎಂದು ಹೇಳಿದ್ದಾರೆ. 
ಲಿಂಗಾಯತರಿಗೆ ಪ್ರತ್ಯೇಕ ಧರ್ಮ ಹಾಗೂ ರಾಜ್ಯಕ್ಕೆ ಪ್ರತ್ಯೇಕ ಧ್ವಜಕ್ಕಾಗಿ ಪ್ರಯತ್ನಗಳನ್ನು ಮಾಡುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಉದ್ದೇಶವಾದರೂ ಏನು? ರಾಜ್ಯ ಜನತೆಯೇ ಪ್ರತ್ಯೇಕ ಧ್ವಜ ಬೇಕೆಂದು ಆಗ್ರಹಿಸಿದರೆ, ಇದರೆ, ನಾನೇನೂ ಪ್ರತಿಕ್ರಿಯೆಗಳನ್ನು ನೀಡುವುದಿಲ್ಲ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಸಭೆ ಚುನಾವಣೆ ಹತ್ತಿರಬರುವುದಕ್ಕೂ ಮುನ್ನ ಈ ವಿಚಾರಗಳ ಬಗ್ಗೆ ದನಿ ಎತ್ತಿರಲಿಲ್ಲ. ಕಳೆದ ನಾಲ್ಕೂವರೆ ವರ್ಷಗಳಲ್ಲಿ ಈ ವಿಚಾರಗಳ ಬಗ್ಗೆ ಏಕೆ ಸಿದ್ದರಾಮಯ್ಯ ಅವರು ಮಾತನಾಡಲಿಲ್ಲ. ಇದು ಅವರ ಉದ್ದೇಶವನ್ನು ತಿಳಿಸುತ್ತದೆ ಎಂದು ತಿಳಿಸಿದ್ದಾರೆ. 
ಶಾಮನೂರು ಶಿವಶಂಕಪ್ಪ ಅವರು ಮಾತನಾಡಿ, ನಮ್ಮ ನಿಲುವಲ್ಲಿ ಯಾವುದೇ ರೀತಿಯ ಬದಲಾವಣೆಗಳಿಲ್ಲ. ನಾಗಮೋಹನ್ ದಾಲ್ ಅವರ ವರದಿಯ ಶಿಫಾರಸುಗಳನ್ನು ಸಂಪುಟ ಒಪ್ಪಿದ್ದೇ ಆದರೆ, ಮಹಾಸಭಾ ಪ್ರತಿಭಟನೆಯನ್ನು ನಡೆಸುತ್ತದೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com