ನನ್ನ ಪುತ್ರ ಕಾಂಗ್ರೆಸ್ ಟಿಕೆಟ್ ಕೇಳಿಯೇ ಇಲ್ಲ: ಸಿಎಂ ಸಿದ್ದರಾಮಯ್ಯ

ನನ್ನ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕಾಗಿ ಇನ್ನೂ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಚಿತ್ರದುರ್ಗ: ನನ್ನ ಪುತ್ರ ಡಾ. ಯತೀಂದ್ರ ವರುಣಾ ಕ್ಷೇತ್ರದಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವುದಕ್ಕಾಗಿ ಇನ್ನೂ ಕಾಂಗ್ರೆಸ್ ಟಿಕೆಟ್ ಕೇಳಿಯೇ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಹೇಳಿದ್ದಾರೆ.
ಇಂದು ಚಿತ್ರದುರ್ಗದಲ್ಲಿ ಸಚಿವರ ಮಕ್ಕಳಿಗೆ ಟಿಕೆಟ್ ಕೊಡುವ ವಿಚಾರಕ್ಕೆ ಸಂಬಂಧಿಸಿದಂತೆ ವರದಿಗಾರರಿಗೆ ಪ್ರತಿಕ್ರಿಯಿಸಿದ ಸಿಎಂ, ನನ್ನ ಪುತ್ರ ಇನ್ನೂ ಕಾಂಗ್ರೆಸ್ ಟಿಕೆಟ್ ಕೇಳಿಯೇ ಇಲ್ಲ. ಜನಾಪೇಕ್ಷೆ ಮೇರೆಗೆ ಚುನಾವಣ ಕಣಕ್ಕಿಳಿಯುವ ಬಗ್ಗೆ ತೀರ್ಮಾನಿಸಲಾಗುತ್ತದೆ. ವೀಕ್ಷಕರ ಸಮೀಕ್ಷೆಯ ಮೇರೆಗೆ ಹೈಕಮಾಂಡ್ ಟಿಕೆಟ್ ನೀಡುತ್ತದೆ. ಟಿಕೆಟ್ ಕೇಳಲು ಎಲ್ಲರಿಗೂ ಹಕ್ಕಿದೆ ಎನ್ನುವ ಮೂಲಕ ಮಗನನ್ನು ಚುನಾವಣಾ ಕಣಕ್ಕಿಳಿಯುವ ಸೂಚನೆಯನ್ನು ಮತ್ತಷ್ಟು ಬಲಗೊಳಿಸಿದರು.
ಇದೇ ವೇಳೆ ಮೇ ತಿಂಗಳಲ್ಲಿ ನಡೆಯುವ ರಾಜ್ಯ ವಿಧಾನಸಭೆ ಮತ್ತು ಮುಂದಿನ ವರ್ಷ ನಡೆಯುವ ಲೋಕಸಭೆ ಚುನಾವಣೆಯಲ್ಲೂ ಕಾಂಗ್ರೆಸ್‌ ಜಯ ಗಳಿಸಲಿದೆ ಎಂದು ಸಿದ್ದರಾಮಯ್ಯ ವಿಶ್ವಾಸ ವ್ಯಕ್ತ‍ಪಡಿಸಿದರು.
ಇನ್ನು ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿಎಂ, ಈ ಸಂಬಂಧ ಕೆಲವು ಮಠಾಧೀಶರು ಇಂದು ತಮ್ಮನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ. ಲಿಂಗಾಯತ ಪ್ರತ್ಯೇಕ ಧರ್ಮದ ಅಗತ್ಯವಿಲ್ಲ ಎಂದು ತಿಳಿಸಿದ್ದಾರೆ. ಸಂಪುಟ ಸಭೆಯಲ್ಲಿ ಚರ್ಚಿಸಿ ಮುಂದಿನ ತೀರ್ಮಾನ ಮಾಡಲಾಗುತ್ತದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com