ಪ್ರಧಾನಿ ಮೋದಿ ಶ್ರೀಸಾಮಾನ್ಯನಿಗೆ ಅವಮಾನ ಮಾಡುತ್ತಿದ್ದಾರೆ: ರಾಹುಲ್ ಗಾಂಧಿ

Published On :
ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾರತದ ಅಭಿವೃದ್ಧಿಗೆ ತಾವೇ ಕಾರಣ ಎಂದು ಹೇಳುವ ಮೂಲಕ ಸಾಮಾನ್ಯ ಜನತೆಗೆ ಅವಮಾನ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ಮಂಗಳವಾರ ಹೇಳಿದ್ದಾರೆ.
ಮೂರನೇ ಬಾರಿ ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅವರು ಇಂದು ಪಡುಬಿದ್ರೆಯಲ್ಲಿ ಕಾಂಗ್ರೆಸ್ ಜನಾರ್ಶೀವಾದ ಯಾತ್ರೆ ಉದ್ದೇಶಿಸಿ ಮಾತನಾಡಿದರು.
ಪ್ರಧಾನಿ ಮೋದಿ ಅವರು ಎಲ್ಲೇ ಹೊದರು, ಕಳೆದ 70 ವರ್ಷಗಳಲ್ಲಿ ದೇಶ ಯಾವುದೇ ಪ್ರಗತಿ ಕಂಡಿಲ್ಲ ಎಂದು ಹೇಳುವ ಮೂಲಕ ನಿಮ್ಮ ಪೋಷಕರನ್ನು, ಬಡ ರೈತರನ್ನು ಕಾರ್ಮಿಕರನ್ನು ಮತ್ತು ಸಣ್ಣ ವ್ಯಾಪಾರಿಗಳನ್ನು ಅವಮಾನಿಸಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಇಂದು ಭಾರತ ಇತರೆ ಅಭಿವೃದ್ಧಿ ಹೊಂದಿದ ರಾಷ್ಟ್ರಗಳಿಗೆ ಸರಿಸಮಾನವಾಗಿ ಬೆಳೆದಿದೆ ಎಂದರೆ ಅದಕ್ಕೆ ಈ ಹಿಂದೆ ಕಾಂಗ್ರೆಸ್ ಸರ್ಕಾರ ಮಾಡಿದ ಸಾಧನೆಗಳೇ ಕಾರಣ. ಅದು ಎರಡು ವರ್ಷಗಳಲ್ಲಿ ಮಾಡಿದ ಅಭಿವೃದ್ಧಿ ಅಲ್ಲ. ಜನ ಸಾಮಾನ್ಯರ ಬೆವರು ಮತ್ತು ರಕ್ತದಿಂದ ದೇಶ ಅಭಿವೃದ್ಧಿಯಾಗಿದೆ. ಮೋದಿ ಮೊದಲು ಸಾಮಾನ್ಯ ಜನರಿಗೆ ಅವಮಾನ ಮಾಡುವುದನ್ನು ನಿಲ್ಲಿಸಬೇಕು ಎಂದು ರಾಹುಲ್ ಹೇಳಿದ್ದಾರೆ.
ಕೇವಲ ಒಬ್ಬ ವ್ಯಕ್ತಿಯಿಂದ ದೇಶ ಅಭಿವೃದ್ದಿ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ, ಬಿಜೆಪಿ ಸಮಾಜವನ್ನು ಧರ್ಮದ ಹೆಸರಿನಲ್ಲಿ ಇಬ್ಭಾಗ ಮಾಡುತ್ತಿದೆ ಎಂದು ಆರೋಪಿಸಿದರು. ಅಲ್ಲದೆ ಪ್ರಧಾನಿ ಮೋದಿ ದೊಡ್ಡ ದೊಡ್ಡ ಉದ್ಯಮಿಗಳ ಸಾಲ ಮನ್ನಾ ಮಾಡುತ್ತಿದ್ದಾರೆ ಎಂದು ದೂರಿದರು.
ತಮ್ಮ ಭಾಷಣದಲ್ಲಿ ಬಸವಣ್ಣ ಹಾಗೂ ನಾರಾಯಣ ಗುರು ಅವರನ್ನು ಪ್ರಸ್ತಾಪಿಸಿದ ರಾಹುಲ್, ಬಸವಣ್ಣ, ನಾರಾಯಣ ಗುರು ಗಳ ಮಾತಿನಂತೆ ಬಿಜೆಪಿ ಸರ್ಕಾರ ನುಡಿದಂತೆ ನಡೆದಿಲ್ಲ. 15 ಲಕ್ಷ ರುಪಾಯಿ ಕೊಡುವ ಭರವಸೆ ನೀಡಿ ಹತ್ತು ರುಪಾಯಿಯನ್ನು ನೀಡಿಲ್ಲ ಎಂದು ಲೇವಡಿ ಮಾಡಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Narendra Modiನರೇಂದ್ರ ಮೋದಿKarnatakaಕರ್ನಾಟಕRahul Gandhiರಾಹುಲ್ ಗಾಂಧಿinsulting common manಸಾಮಾನ್ಯನಿಗೆ ಅವಮಾನ
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


