ವೀರಶೈವ, ಲಿಂಗಾಯತ ಪ್ರತ್ಯೇಕ ಧರ್ಮವಾದರೆ ಎಸ್ಸಿ ಮೀಸಲಾತಿಯಿಂದ ವಂಚಿತ: ಕೇಂದ್ರ ಸಚಿವ

ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಸಿದ್ದರಾಮಯ್ಯ ನೇತೃತ್ವದ ಕರ್ನಾಟಕ ಸರ್ಕಾರ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿರುವ ಕೇಂದ್ರ ಸಚಿವ ಅರ್ಜುನ್ ರಾಮ್ ಮೆಘವಾಲ್ ಅವರು, ವೀರಶೈವ, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ ಅವರು ಪರಿಶಿಷ್ಟ ಪಂಗಡ(ಎಸ್ಸಿ)ದ ಮೀಸಲಾತಿಯಿಂದ ವಂಚಿತರಾಗಲಿದ್ದಾರೆ ಎಂದು ಮಂಗಳವಾರ ಹೇಳಿದ್ದಾರೆ.
ಸಂವಿಧಾನದಲ್ಲಿ ಹಿಂದೂ, ಬೌದ್ಧರಿಗೆ ಮತ್ತು ಸಿಖ್ಖರಿಗೆ ಮಾತ್ರ ಎಸ್ಪಿ ಮೀಸಲಾತಿ ಕಲ್ಪಿಸಲಾಗಿದೆ. ಒಂದು ವೇಳೆ ವೀರಶೈವ, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಿದರೆ ಅವರು ಎಸ್ಸಿ ಮೀಸಲಾತಿ ಸೌಲಭ್ಯದಿಂದ ವಂಚಿತರಾಗಲಿದ್ದಾರೆ. ಇದೇ ಕಾರಣಕ್ಕೆ 20013ರಲ್ಲಿ ಯುಪಿಎ ಸರ್ಕಾರ ವೀರಶೈವ, ಲಿಂಗಾಯತರಿಗೆ ಪ್ರತ್ಯೇಕ ಧರ್ಮದ ಸ್ಥಾನಮಾನ ನೀಡಲು ನಿರಾಕರಿಸಿತ್ತು. ಆದರೆ ಈಗ ಕಾಂಗ್ರೆಸ್ ಸರ್ಕಾರ ರಾಜಕೀಯ ಲಾಭಕ್ಕಾಗಿ ತನ್ನ ಹಿಂದಿನ ನಿರ್ಧಾರ ಮರೆತು ಉಲ್ಟಾ ಹೊಡೆದಿದೆ ಎಂದು ಸಂಸದೀಯ ವ್ಯವಹಾರಗಳ ಖಾತೆ ರಾಜ್ಯ ಸಚಿವ ಮೆಘವಾಲ್ ಅವರು ಆರೋಪಿಸಿದ್ದಾರೆ.
ರಾಜ್ಯದ ಪ್ರಭಾವಿ ಲಿಂಗಾಯತ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗುವುದನ್ನು ತಡೆಯುವುದಕ್ಕಾಗಿ ಕಾಂಗ್ರೆಸ್ 'ಧರ್ಮ' ರಾಜಿಕೀಯ ಮಾಡುತ್ತಿದೆ ಎಂದು ಮೆಘವಾಲ್ ಅವರು ವಾಗ್ದಾಳಿ ನಡೆಸಿದ್ದಾರೆ.
ಲಿಂಗಾಯತ ಹಾಗೂ ವೀರಶೈವ ಲಿಂಗಾಯತರಿಗೆ (ಬಸವ ತತ್ವವನ್ನು ನಂಬುವ) ಅಲ್ಪಸಂಖ್ಯಾತ ಧರ್ಮದ ಮಾನ್ಯತೆ ನೀಡಬೇಕು ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲು ಸೋಮವಾರ ರಾಜ್ಯ ಸಚಿವ ಸಂಪುಟ ಸಭೆ ತೀರ್ಮಾನಿಸಿದೆ. ಇದಕ್ಕೆ ಬಿಜೆಪಿ ಹಾಗೂ ವೀರಶೈವರಿಂದ ತೀವ್ರ ವಿರೋಧ ವ್ಯಕ್ತವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com