ಬೆಂಗಳೂರು: ಭಾರತೀಯ ಜನತಾ ಪಕ್ಷ ಮಾರ್ಚ್ 26 ರಂದು 2ನೇ ಹಂತದ ಬೆಂಗಳೂರು ರಕ್ಷಿಸಿ ಕಾರ್ಯಕ್ರಮ ಹಮ್ಮಿಕೊಳ್ಳಲು ಸಿದ್ದತೆ ನಡೆಸಿದೆ.
ಬಿಜೆಪಿ ಮೊದಲ ಹಂತದ ಬೆಂಗಳೂರು ರಕ್ಷಿಸಿ ಪಾದಯಾತ್ರೆಗೆ ಪ್ರತಿಯಾಗಿ ಕಾಂಗ್ರೆಸ್ ನಮ್ಮ ಬೆಂಗಳೂರು ನಮ್ಮ ಹೆಮ್ಮೆ ಪಾದಯಾತ್ರೆ ಹಮ್ಮಿಕೊಂಡಿದೆ.
ಶಾಸಕ ಎನ್ ಎ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಗೂಂಡಾ ವರ್ತನೆ ಹಾಗೂ ಕಾಂಗ್ರೆಸ್ ಮುಖಂಡ ನಾರಾಯಣ ಸ್ವಾಮಿ ಪ್ರಕರಣಗಳು ಸಾರ್ವಜನಿಕರ ಮನಸಲ್ಲಿ ಇನ್ನೂ ಹಸಿಯಾಗಿದೆ.
ಕಾನೂನು ಮತ್ತು ಸುವ್ಯವಸ್ಥೆಯ ವಿಷಯಗಳನ್ನು ಹೈಲೈಟ್ ಮಾಡುವ ಮೂಲಕ ಬಿಜೆಪಿ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಪ್ರತಿಭಟನೆ ಮುಂದುವರಿಸಲು ನಿರ್ಧರಿಸಿದೆ, ನಗರದಲ್ಲಿ ಗೂಂಡಾಗಿರಿ ಮತ್ತು ಡ್ರಗ್ ಮಾಫಿಯಾ ಹೆಚ್ಚುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.
ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ಹಾಗೂ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುರುಳಿಧರ್ ರಾವ್ ಎರಡನೇ ಹಂತದ ಕಾರ್ಯಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ.