ಪಕ್ಷದ ಅಭ್ಯರ್ಥಿ ಬಿ.ಎಂ.ಫಾರೂಕ್ ಪರ ತಮ್ಮ ಮೊದಲ ಪ್ರಾಶಸ್ತ್ಯದ ಮತ ಚಲಾಯಿಸಬೇಕು ಎಂದು ವಿಪ್ ನೀಡಿದ್ದಾರೆ. ಮಾ.23ರಂದು ಚುನಾವಣೆ ನಡೆಯಲಿದ್ದು, ಜೆಡಿಎಸ್ ಅಭ್ಯರ್ಥಿಯಾಗಿ ಬಿ.ಎಂ.ಫಾರೂಕ್ ಅವರನ್ನು ಕಣಕ್ಕಿಳಿಸಿದೆ. ಬಂಡಾಯ ಶಾಸಕರು, ಪಕ್ಷೇತರ ಶಾಸಕರು ಮತ್ತು ಇತರೆ ಶಾಸಕರ ಬೆಂಬಲದೊಂದಿಗೆ ತಮ್ಮ ಬೆಂಬಲದೊಂದಿಗೆ ಪಕ್ಷದ ಅಭ್ಯರ್ಥಿಯನ್ನು ಗೆಲ್ಲಿಸಿಕೊಳ್ಳಬಹುದು ಎಂಬ ಲೆಕ್ಕಾಚಾರದಲ್ಲಿ ಅಖಾಡಕ್ಕಿಳಿಸಿದೆ. ಈ ಹಿಂದೆಯೂ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ವಿಪ್ ಉಲ್ಲಂಘಿಸಿ ಏಳು ಮಂದಿ ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್‌ಗೆ ಮತ ಚಲಾಯಿಸಿದ್ದರು. ಪರಿಣಾಮ ಪಕ್ಷದ ಅಭ್ಯರ್ಥಿಯಾಗಿದ್ದ ಫಾರೂಕ್ ಸೋಲು ಅನುಭವಿಸಬೇಕಾಯಿತು.