ಜೆಡಿಎಸ್ ಬಿಜೆಪಿಯ ಬಿ ಟೀಂ ಹೌದೋ, ಅಲ್ಲವೋ ಎಂದು ಸ್ಪಷ್ಟಪಡಿಸಲಿ: ರಾಹುಲ್ ಗಾಂಧಿ

Published On :
ಮೈಸೂರು: ಜೆಡಿಎಸ್ ವಿರುದ್ಧ ವಾಗ್ದಾಳಿ ಮುಂದುವರೆಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು, ಬಿಜೆಪಿಯನ್ನು ಬೆಂಬಲಿಸುವ ಕುರಿತು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಅವರ ಪಕ್ಷ ಸ್ಪಷ್ಟ ನಿರ್ಧಾರಕ್ಕೆ ಬರಲಿ ಎಂದು ಭಾನುವಾರ ಹೇಳಿದ್ದಾರೆ.
ಇಂದು ಮೈಸೂರಿನಲ್ಲಿ ಕಾಂಗ್ರೆಸ್ ಜನಾರ್ಶೀವಾದ ಯಾತ್ರೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಜೆಡಿಎಸ್ ಬಿಜೆಪಿಯ ಬಿ ಟೀಂ ಹೌದೋ, ಅಲ್ಲವೋ ಎಂಬುದುನ್ನು ಮೊದಲು ಸ್ಪಷ್ಟಪಡಿಸಲಿ ಎಂದರು.
ಕರ್ನಾಟಕದ ಪ್ರತಿ ಬೂತ್ ನಲ್ಲೂ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಕಾರ್ಯಕರ್ತರು ಕಠಿಣ ಹೋರಾಟ ನಡೆಸಬೇಕಾಗಿದೆ. 2018ರ ಕರ್ನಾಟಕ ವಿಧಾನಸಭೆ ಮತ್ತು 2019ರ ಲೋಕಸಭೆ ಚುನಾವಣೆ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಲಿದೆ ಎಂದು ರಾಹುಲ್ ಗಾಂಧಿ ವಿಶ್ವಾಸ ವ್ಯಕ್ತಪಡಿಸಿದರು.
ಪಕ್ಷದ ಬೆನ್ನೆಲುಬಾಗಿರುವ ಎಲ್ಲಾ ಕಾಂಗ್ರೆಸ್ ಕಾರ್ಯಕರ್ತರಿಗೆ ಧನ್ಯವಾದಗಳು ಮತ್ತು ಇಂದು ನಮ್ಮೊಂದಿಗೆ ಕೈ ಜೋಡಿಸಿದ ಜೆಡಿಎಸ್ ನಾಯಕರಿಗೆ ಸ್ವಾಗತ ಎಂದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧವೂ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ ಅವರು, ದೇಶದ ಜನತೆಗೆ ಮತ್ತು ಯುವಕರಿಗೆ ಆಚ್ಛೆ ದಿನ್ ಬರುತ್ತೆ ಎಂದು ಹೇಳಿದ್ದರು. ಆದರೆ ಇದುವರೆಗೂ ಆಚ್ಚೆ ದಿನ್ ಬರಲೇ ಇಲ್ಲ. ಮೋದಿ ರೈತರ ಸಾಲ ಮನ್ನಾ ಮಾಡಲು ನಿರಾಕರಿಸಿದರು. ಆದರೆ ಸಿದ್ದರಾಮಯ್ಯ ಹತ್ತೇ ದಿನದಲ್ಲಿ ರೈತರ ಸಾಲ ಮನ್ನಾ ಮಾಡಿದರು.
ದೇಶದಲ್ಲಿ ನಿರುದ್ಯೋಗ ಸಮಸ್ಯೆ ಬಹುದೊಡ್ಡ ಸಮಸ್ಯೆಯಾಗಿದ್ದು, ಉದ್ಯೋಗ ಸೃಷ್ಟಿಸುವಲ್ಲಿ ಪ್ರಧಾನಿ ಮೋದಿ ಸಂಪುರ್ಣ ವಿಫಲರಾಗಿದ್ದಾರೆ ಎಂದರು.
ಪ್ರಧಾನಿ ಮೋದಿ ಅವರು ಸ್ಟಾರ್ಟ್ ಅಪ್ ಇಂಡಿಯಾ ಬಗ್ಗೆ ಮಾತನಾಡುತ್ತಿದ್ದಾರೆ. ಆದರೆ ಭಾರತಕ್ಕೆ ಕರ್ನಾಟಕ ನಿಜವಾದ ಸ್ಟಾರ್ಟ್ ಅಪ್ ಹಬ್. ಇಲ್ಲಿ ವಿಶ್ವದಲ್ಲೇ ಅತಿ ದೊಡ್ಡ ಸೋಲಾರ್ ಪವರ್ ಪ್ಲಾಂಟ್ ಇದೆ ಮತ್ತು ಏಷ್ಯಾದ ಅತಿ ದೊಡ್ಡ ಹನಿ ನೀರಾವರಿ ಹೊಂದಿದೆ ಕಾಂಗ್ರೆಸ್ ಅಧ್ಯಕ್ಷ ಹೇಳಿದರು.
ಕರ್ನಾಟಕದಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಹಾಗೂ ಉಚಿತ ಲ್ಯಾಪ್ ಟಾಪ್ ನೀಡಲಾಗುತ್ತಿದೆ. ಸುಮಾರು 61 ಲಕ್ಷ ವಿದ್ಯಾರ್ಥಿಗಳು ಉಚಿತವಾಗಿ ಪಠ್ಯ ಪುಸ್ತಕ ಪಡೆದಿದ್ದಾರೆ. ಇಲ್ಲಿ ಎಲ್ ಕೆಜಿಯಿಂದ ಪಿಜಿವರೆಗೆ ಉಚಿತ ಶಿಕ್ಷಣ ಪಡೆಯಬಹುದು. ಆದೆ ಗುಜರಾತ್ ನಲ್ಲಿ ಒಂದು ಪದವಿ ಪಡೆಯಲು ಪ್ರತಿಯೊಬ್ಬರು 15 ಲಕ್ಷ ರುಪಾಯಿ ವೆಚ್ಚ ಮಾಡಬೇಕಾಗಿದೆ ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


