ಕಾಂಗ್ರೆಸ್
ರಾಜಕೀಯ
ರಾಹುಲ್ ಗಾಂಧಿ ಸಮ್ಮುಖದಲ್ಲಿ ಕಾಂಗ್ರೆಸ್ ಸೇರಿದ ಜೆಡಿಎಸ್‌ನ ಏಳು ರೆಬಲ್ ಶಾಸಕರು
ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ನ ರೆಬಲ್ ಶಾಸಕರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ...
ಬೆಂಗಳೂರು: ಮುಂಬರುವ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ಜೆಡಿಎಸ್ ನ ರೆಬಲ್ ಶಾಸಕರು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಸಮ್ಮುಖದಲ್ಲಿ ರೆಬಲ್ ಶಾಸಕರಾದ ಜಮೀರ್ ಅಹಮ್ಮದ್ ಖಾನ್, ಚಲುವರಾಯ ಸ್ವಾಮಿ, ಇಕ್ಬಾಲ್ ಅನ್ಸಾರಿ, ಬಾಲಕೃಷ್ಣ, ರಮೇಶ್ ಬಂಡಿಸಿದ್ದೇಗೌಡ, ಭೀಮಾ ನಾಯ್ಕ್ ಮತ್ತು ಅಖಂಡ ಶ್ರೀನಿವಾಸಮೂರ್ತಿ ಕಾಂಗ್ರೆಸ್ ಗೆ ಸೇರಿದ್ದಾರೆ.
2016ರಲ್ಲಿ ನಡೆದ ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದ ಜೆಡಿಎಸ್ ಪಕ್ಷದ 7 ಬಂಡಾಯ ಶಾಸಕರನ್ನು ಪಕ್ಷದಿಂದ ಅಮಾನತು ಮಾಡಲಾಗಿತ್ತು. ರೆಬಲ್ ಶಾಸಕರು ಸ್ಪೀಕರ್ ಕೆಬಿ ಕೋಳಿವಾಡ ಅವರಿಗೆ ರಾಜಿನಾಮೆ ಪತ್ರವನ್ನು ಸಲ್ಲಿಸಿದ್ದರು.
ಇದೇ ವೇಳೆ ಜೆಡಿಎಸ್ ಮಾಜಿ ಎಂಎಲ್ಸಿ ಎಂಸಿ ನಾಣಯ್ಯ, ಸರೋವರ್ ಶ್ರೀವಾಸ್ ಮತ್ತು ಬಿ ರಾಮಕೃಷ್ಣ ಸಹ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ