ಕರ್ನಾಟಕ ವಿಧಾನಸಭೆ ಚುನಾವಣೆ ಕಣಕ್ಕೆ ಅಸಾದುದ್ದೀನ್ ಓವೈಸಿ ಪಕ್ಷ

ಹೈದರಾಬಾದ್ ಲೋಕಸಭಾ ಎಂಪಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಕರ್ನಾಟಕ ವಿಧಾನಸಬಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ.
ಅಸಾದುದ್ದೀನ್ ಓವೈಸಿ
ಅಸಾದುದ್ದೀನ್ ಓವೈಸಿ
Updated on: 
ಹೈದರಾಬಾದ್: ಹೈದರಾಬಾದ್ ಲೋಕಸಭಾ ಎಂಪಿ ಅಸಾದುದ್ದೀನ್ ಓವೈಸಿ ನೇತೃತ್ವದ ಎಐಎಂಐಎಂ ಕರ್ನಾಟಕ ವಿಧಾನಸಬಾ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಿದೆ. 
"ನಾವು ಕರ್ನಾಟಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದೇವೆ, ಆದರೆ ಎಷ್ಟು ಸ್ಥಾನಗಳಿಗೆ ಅಭ್ಯರ್ಥಿಗಳನ್ನು ನಿಲ್ಲಿಸುತ್ತೇವೆ ಎನ್ನುವ ಕುರಿತು ಇನ್ನೂ ಅಂತಿಮ ನಿರ್ಧಾರಕ್ಕೆ ಬಂದಿಲ್ಲ" ಎಂದು ಪಕ್ಷದ ಮೂಲಗಳು ತಿಳಿಸಿವೆ.
ಚುನಾವಣೆಯಲ್ಲಿ ಪಕ್ಷವು ಏಕಾಂಗಿಯಾಗಿಯೇ ಹೋರಾಟಕ್ಕಿಳಿಯಲಿದೆ. ಯಾವ ರಾಜಕೀಯ ಪಕ್ಷದೊಡನೆ ಮೈತ್ರಿ ಮಾಡಿಕೊಳ್ಳುವ ಕುರಿತು ಯೋಚಿಸಿಲ್ಲ  ಎಂದು ಹೇಳಲಾಗಿದೆ.
ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ತೆಲಂಗಾಣ ವಿಧಾನಸಭೆಯಲ್ಲಿ ಏಳು ಸದಸ್ಯರನ್ನು ಹೊಂದಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com