

ದಾವಣಗೆರೆ : ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪ್ರಚಂಡ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಆಧ್ಯಕ್ಷ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ದಾವಣಗೆರೆಯಲ್ಲಿಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ರಾಜ್ಯ ವಿಧಾನಸಭಾ ಚುನಾವಣೆಗೆ ಮೇ 15 ರಂದು ಚುನಾವಣೆ ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಸ್ವಾಗತಿಸುವುದಾಗಿ ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಲ್ಕೂವರೆ ವರ್ಷದಲ್ಲಿ ಅನೇಕ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಾನೂನು ಸುವ್ಯವಸ್ಥೆ ಕುಸಿದು ಬಿದಿದ್ದು, ಈ ಬಾರಿ ಬಿಜೆಪಿಗೆ ಸ್ಪಷ್ಟ ಬಹುಮತ ದೊರೆಯಲಿದೆ. ಬಿ. ಎಸ್. ಯಡಿಯೂರಪ್ಪ ಎನ್ ಡಿಎ ಮೈತ್ರಿಕೂಟವಿರುವ 23 ರಾಜ್ಯದ ಮುಖ್ಯಮಂತ್ರಿಯಾಗಲಿದ್ದಾರೆ ಎಂದರು.
ಕಾಂಗ್ರೆಸ್ ಮುಕ್ತ ಭಾರತ ನಿರ್ಮಾಣದ ಹೆಜ್ಜೆಯಲ್ಲಿ ಸನ್ನಿಹದಲ್ಲಿರುವುದಾಗಿ ಅಮಿತ್ ಶಾ ಹೇಳಿದರು.