2018ರ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಶೇ 46ರಷ್ಟು ಮತಗಳನ್ನು ಪಡೆಯಲಿದೆ. ಹಿಂದಿನ ಚುನಾವಣೆಗೆ ಹೋಲಿಸಿದರೆ ಶೇ 9ರಷ್ಟು ಹೆಚ್ಚು ಮತಗಳನ್ನು ಪಡೆಯುವ ಸಾಧ್ಯತೆಯಿದೆ. ಬಿಜೆಪಿ ಮತ್ತು ಜೆಡಿಎಸ್ ಕ್ರಮವಾಗಿ ಶೇ 31 ಹಾಗೂ ಶೇ 16 ರಷ್ಟು ಮತಗಳನ್ನು ಪಡೆಯಲಿವೆ. ಜೆಡಿಎಸ್ ಮತಗಳಿಕೆ ಪ್ರಮಾಣ ಕಳೆದ ಸಲಕ್ಕಿಂತಲೂ ಶೇ 4ರಷ್ಟು ಕಡಿಮೆಯಾಗುವ ಸಂಭವವಿದೆ. ಈ ಪಕ್ಷದ ಮುಸ್ಲಿಂ, ದಲಿತ ಮತಗಳು ಕಾಂಗ್ರೆಸ್ ಪರ ವಾಲಬಹುದೆಂದು ಸಮೀಕ್ಷೆ ವಿವರಿಸಿದೆ.