ಕರ್ನಾಟಕ ವಿಧಾನಸಭಾ ಚುನಾವಣೆ: ಮೂರು ಪ್ರಮುಖ ಪಕ್ಷಗಳಿಂದ ಭರ್ಜರಿ ಸಿದ್ಧತೆ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ಪ್ರಕಟಿಸಿರುವುದರ ಬೆನ್ನಲ್ಲೇ, ರಾಜ್ಯದಲ್ಲಿ ಒಂದೂವರೆ ತಿಂಗಳು ಚುನಾವಣಾ ಜ್ವರ ಆರಂಭಗೊಂಡಂತಾಗಿದೆ...
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ,  ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ  ಕುಮಾರಸ್ವಾಮಿ
ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ, ಮುಖ್ಯಮಂತ್ರಿ ಸಿದ್ದರಾಮಯ್ಯ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ
Updated on: 
ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಗೆ ಕೇಂದ್ರ ಚುನಾವಣಾ ಆಯೋಗ ಮಂಗಳವಾರ ದಿನಾಂಕ ಪ್ರಕಟಿಸಿರುವುದರ ಬೆನ್ನಲ್ಲೇ, ರಾಜ್ಯದಲ್ಲಿ ಒಂದೂವರೆ ತಿಂಗಳು ಚುನಾವಣಾ ಜ್ವರ ಆರಂಭಗೊಂಡಂತಾಗಿದೆ.
ಕಾಂಗ್ರೆಸ್ ಅಧಿಕಾರದಲ್ಲಿರುವ ಏಕೈಕ ರಾಜ್ಯ ಕರ್ನಾಟಕವಾಗಿರುವುದರಿಂದ ರಾಜ್ಯ ಚುನಾವಣೆ ಕಾಂಗ್ರೆಸ್ಸಿಗೆ ಮರ್ಯಾದೆಯ ಪ್ರಶ್ನೆಯಾಗಿದೆ. ಇನ್ನು ಕಾಂಗ್ರೆಸ್ ಮುಕ್ತ ದೇಶವಾಗಿಸುವ ಉದ್ದೇಶ ಹೊಂದಿರುವ ಬಿಜೆಪಿಗೆ ಕರ್ನಾಟಕ ಗೆಲ್ಲುವುದು ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಇದರಂತೆ 10 ವರ್ಷಗಳಿಂದ ಅಧಿಕಾರದಿಂದ ವಂಚಿತವಾಗಿರುವ ಜೆಡಿಎಸ್ ಪಕ್ಷಕ್ಕೂ ಇದು ಅಸ್ತಿತ್ವದ ಪ್ರಶ್ನೆಯಾಗಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲವು ಸಾಧಿಸಲು ಮೂರು ಪಕ್ಷಗಳೂ ಭಾರಿ ಸಿದ್ಧತೆಗಳನ್ನು ನಡೆಸುತ್ತಿವೆ. 
ರಾಜ್ಯ ಚುನಾವಣೆ ಸಿದ್ಧತೆಗೆ ಅಣಿಯಾಗಿರುವ ಕಾಂಗ್ರೆಸ್, ಚುನಾವಣಾ ಪ್ರಣಾಳಿಕೆ ಸಿದ್ಧತೆ, ಅಭ್ಯರ್ಥಿಗಳ ಆಯ್ಕೆ, ಪ್ರಚಾರ ರಣತಂತ್ರದ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲು ಮುಂದಾಗಿದೆ. 
ಚುನಾವಣಾ ದಿನಾಂಕ ಘೋಷಣೆಯಾಗಿರುವ ಬೆನ್ನಲ್ಲೇ ಶೀಘ್ರಗತಿಯಲ್ಲಿ ಅಭ್ಯರ್ಥಿಗಳ ಘೋಷಣೆಗೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸೋಮವಾರವಷ್ಟೇ ಚುನಾವಣಾ ಸಮಿತಿ ಸಭೆಯಲ್ಲಿ ತೆಗೆದುಕೊಂಡಿದ್ದ ತೀರ್ಮಾನದಂತೆ ಆಕಾಂಕ್ಷಿಗಳ ಪಟ್ಟಿಯನ್ನಕು ಪಕ್ಷದ ಹೈಕಮಾಂಡ್'ಗೆ ರವಾನೆ ಮಾಡಿದೆ. ಅಲ್ಲದೆ. ಮಾ.28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಚುನಾವಣಾ ಸಿದ್ಧತೆ ಹಾಗೂ ರಣತಂತ್ರ ರೂಪಿಸುವ ಬಗ್ಗೆ ಸಭೆ ನಡೆಸಲಿದ್ದಾರೆ. 
ಏ.2 ರಂದು ಹೈಕಮಾಂಡಂ ಮಟ್ಟದಲ್ಲಿ ಮತ್ತೊಂದು ಸಭೆ ನಡೆಯಲಿದ್ದು, ಈ ಮೂಲಕ ಏ.10ರೊಳಗಗಾಗಿ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಲು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ನಾಲ್ಕೂ ವಿಭಾಗಕ್ಕೂ ಪ್ರತ್ಯೇಕ ಪ್ರಣಾಳಿಕೆ ರಚಿಸಿದ್ದು, ಹೈಕಮಾಂಡ್ ಒಪ್ಪಿಗೆ ದೊರೆತ ಬಳಿಕ ಪ್ರಣಾಳಿಕೆಯನ್ನು ಬಿಡುಗಡೆ ಮಾಡಲು ಸಿದ್ಧತಚೆ ನಡೆಸಿದೆ. 
ಇದರಂದೆ ಬಿಜೆಪಿಯ ಬಿರುಸಿನ ಚಟುವಟಿಕೆಗಳೂ ಕೂಡ ಆರಂಭಗೊಂಡಿದ್ದು, ಪಕ್ಷದ ಸಂಘಟನೆ ಬಲಗೊಳಿಸುವುದರ ಜೊತೆಗೆ ಪ್ರಚಾರವನ್ನು ತೀವ್ರಗೊಳಿಸಲು ಮುಂದಾಗಿದೆ. 
ಚುನಾವಣಾ ಸಿದ್ಧತೆ ಮತ್ತು ಸಮರ್ಥ ಅಭ್ಯರ್ಥಿಗಳ ಆಯ್ಕೆ ಸಂಬಂಧ ಮುಂದಿನ ವಾರ ಅಂದರೆ, ಏ.3 ರಿಂದ 5ರವರೆಗೆ ಮೂರು ದಿನ ಜಿಲ್ಲಾವಾರು ಪ್ರಮುಖರ ಸಹೆ ನಡೆಸಲು ತೀರ್ಮಾಸಲಾಗಿದೆ ಎಂದು ತಿಳಿದುಬಂದಿದೆ. 
ಈ 3 ದಿನಗಳ ಕಾಲ ಜಿಲ್ಲಾವಾರು ಮುಖಂಡರನ್ನು ಬೆಂಗಳೂರು ನಗರಕ್ಕೆ ಕರೆಸಿ ಅವರೊಂದಿಗೆ ಆಯಾ ಜಿಲ್ಲೆ ಮತ್ತು ವಿಧಾನಸಭಾ ಕ್ಷೇತ್ರಗಳ ಚಿತ್ರಣ ಪಡೆದುಕೊಳ್ಳುವುದರ ಜೊತೆಗೆ ಯಾರನ್ನೂ ಕಣಕ್ಕಿಳಿಸಿದರೆ ಪಕ್ಷಕ್ಕೆ ಹೆಚ್ಚು ಅನುಕೂಲವಾಗುತ್ತದೆ ಎಂಬುದರ ಮಾಹಿಸಿ ಸಂಗ್ರಹಿಸಲು ಉದ್ದೇಶಿಸಲಾಗಿದೆ. 
ಜೊತೆಗೆ ಸಣ್ಣಪುಟ್ಟ ಗೊಂದಲಗಳಿದ್ದರೆ ಅವುಗಳನ್ನು ಬಗೆಹರಿಸಿ ಒಗ್ಗಟ್ಟಿನ ಮಂಟ್ರ ಪಠಿಸಿ ಕಳುಹಿಸಿಕೊಡಲಾಗುತ್ತದೆ. ಉತ್ತರಪ್ರದೇಶ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಅನುಸರಿಸಿದಂತೆ ಜಾತಿ ಸಮೀಕರಣಕ್ಕೂ ಒತ್ತು ನೀಡಲು ನಿರ್ಧರಿಸಲಾಗಿದೆ ಎಂದು ಪಕ್ಷದ ಮೂಲಗಳು ಮಾಹಿತಿ ನೀಡಿವೆ.
ಚುನಾವಣಾ ಕಣವನ್ನು ರಾಜಕೀಯ ಅಸ್ತಿತ್ವದ ಪ್ರಶ್ನೆ ಎಂದೇ ಪ್ರತಿಷ್ಠೆಯಾಗಿ ಸ್ವೀಕರಿಸಿರುವ ಜೆಡಿಎಸ್ ಚುನಾವಣೆ ಗೆಲ್ಲಲು ತನ್ನ ಬತ್ತಳಿಕೆಯಲ್ಲಿನ ಚುನಾವಣಾ ಅಸ್ತ್ರಗಳಿಗೆ ಮತ್ತಷ್ಟು ವೇಗ ನೀಡಲು ಮುಂದಾಗಿದೆ. 
ಕಾಂಗ್ರೆಸ್ ಬಿಜೆಪಿಗಿಂತ ಮೊದಲು ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸಿ ಪ್ರಚಾರಕ್ಕೆ ಧುಮುಕಿದ್ದು, ಮತದಾನಕ್ಕೆ ದಿನಗಣನೆ ಆರಂಭವಾದ ಬೆನ್ನಲ್ಲೇ ಪ್ರಚಾರ ಕಾರ್ಯ ಮತ್ತಷ್ಟು ಚುರುಕುಗೊಳಿಸಲು ನಿರ್ಧರಿಸಿದೆ. 
ಈಗಾಗಲೇ ವಿಕಾಪರ್ವ ಹೆಸರಿನಲ್ಲಿ ಪ್ರಚಾರವನ್ನು ಬಿರುಸಿನಿಂದಲೇ ಪಕ್ಷದ ವರಿಷ್ಠರಾದ ಹೆಚ್.ಡಿ.ದೇವೇಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ಆರಂಭಿಸಿದ್ದಾರೆ. 
ಚುನಾವಣಾ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ ಜೆಡಿಎಸ್ ಸೂಮಾರು 126 ಮಂದಿಯ ಹೆಸರನ್ನು ಪ್ರಕಟಿಸಿದೆ. ಈಗಾಗಲೇ ಅಭ್ಯರ್ಥಿಗಳು ತಮ್ಮ ಕ್ಷೇತ್ರದಲ್ಲಿ ಪ್ರಚಾರ ಕಾರ್ಯಗಳನ್ನು ಆರಂಭಿಸಿದ್ದಾರೆ. 2ನೇ ಪಟ್ಟಿಯನ್ನು ಪ್ರಕಟಿಸಬೇಕಾಗಿದ್ದು, ಇದಕ್ಕಾಗಿ ಸಿದ್ಧತೆಗಳನ್ನು ನಡೆಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com