ನೀತಿ ಸಂಹಿತೆ ಉಲ್ಲಂಘನೆ ಸಂಬಂಧ ಬಿಜೆಪಿ, ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ....
ಸಿದ್ದರಾಮಯ್ಯ-ಅಮಿತ್ ಶಾ
ಸಿದ್ದರಾಮಯ್ಯ-ಅಮಿತ್ ಶಾ

ಬೆಂಗಳೂರು: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಚುನಾವಣಾ ಆಯೋಗಕ್ಕೆ ದೂರು ಸಲ್ಲಿಸಿವೆ.

ಕಾರ್ಯಕರ್ತರ ಮನೆ ಮುಂದೆ ಗೋಡೆಗಳಲ್ಲಿ ಬಿಜೆಪಿ ಮುಖಂಡರ ಪರವಾದ ಹೇಳಿಕೆಗಳನ್ನು ಪಕ್ಷಪಾತೀಯವಾಗಿ ಉದ್ದೇಶಪೂರ್ವಕವಾಗಿ ಅಳಿಸಿಹಾಕಲಾಗುತ್ತಿದೆ ಎಂದು ಬಿಜೆಪಿ ದೂರು ಸಲ್ಲಿಸಿದ್ದರೆ, ಕಾಂಗ್ರೆಸ್ ಮುಖ್ಯಮಂತ್ರಿ ಸಿದ್ದರಾಮಯ್ಯನವರ ವಿರುದ್ಧ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿರುವ ಹೇಳಿಕೆಯನ್ನು ಖಂಡಿಸಿ ದೂರು ನೀಡಿದೆ.

ಚುನಾವಣಾ ಆಯೋಗದ ಅಧಿಕಾರಿಗಳು ಕರ್ನಾಟಕದ ಕೆಲವು ಭಾಗಗಳಲ್ಲಿ ಚುನಾವಣಾ ನೀತಿ ಉಲ್ಲಂಘನೆಯ ಅಡಿಯಲ್ಲಿ, ಕಾರ್ಯಕರ್ತರ ಮನೆ ಮುಂದಿನ ಗೋಡ ಬರಹಗಳಲ್ಲಿ ಅಂತಹ ಯಾವುದೇ ಅಕ್ರಮ ಬರಹಗಳು ಇಲ್ಲದಿದ್ದರೂ ಒತ್ತಾಯಪೂರ್ವಕವಾಗಿ ಅಳಿಸಿಹಾಕುತ್ತಿದ್ದಾರೆ. ಆಯೋಗದ ಅಧಿಕಾರಿಗಳ ಈ ಕಾರ್ಯವು ಪಕ್ಷಪಾತೀಯವಾಗಿದ್ದು,  ವಿಭಜನೆ ಮತ್ತು  ಅನಿಯಂತ್ರಿತವಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ಯ ರವಿಕುಮಾರ್ ದೂರಿದ್ದಾರೆ.

ಬಿಜೆಪಿ ಕಾರ್ಯಕರ್ತರ ಮನೆ ಮುಂದಿರುವ ಇಂತಹ ಗೋಡೆ ಬರಹಗಳನ್ನು ಅಳಿಸಿಹಾಕದಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಬೇಕು ಮತ್ತು ಒಂದು ವೇಳೆ ಕ್ರಮ ಮುಂದುವರಿಸಿದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಹೇಳಿದೆ.

ಇನ್ನೊಂದೆಡೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ದೂರು ನೀಡಿರುವ ರಾಜ್ಯ ಕಾಂಗ್ರೆಸ್. ಜನಪ್ರತಿನಿಧಿ ಕಾಯ್ದೆ ಮತ್ತು ಭಾರತೀಯ ದಂಡ ಸಂಹಿತೆಯನ್ನು ಉಲ್ಲಂಘಿಸಿದ್ದು ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆಪಿಸಿಸಿ ಉಪಾಧ್ಯಕ್ಷ ವಿ.ಸುದರ್ಶನ್ ಚುನಾವಣಾ ಆಯೋಗವನ್ನು ಒತ್ತಾಯಿಸಿದ್ದಾರೆ.

ಅಮಿತ್ ಶಾ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಅವರು ಅಹಿಂದ ಪರವಲ್ಲ ಬದಲಿಗೆ ಅಹಿಂದು ಎಂದು ಟೀಕಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com