ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪುತ್ರ ಸ್ಪರ್ಧಿಸುತ್ತಿಲ್ಲ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಎಂ. ವೀರಪ್ಪ ಮೊಯ್ಲಿಯವರು ಬುಧವಾರ ಸ್ಪಷ್ಟಪಡಿಸಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಿನ್ನೆ ನಡೆಸ ಸಭೆ ಬಳಿಕ ಮಾತನಾಡಿರುವ ವೀರಪ್ಪ ಮೊಯ್ಲಿಯವರು, ತಮ್ಮ ಪುತ್ರನಿಗೆ ಟಿಕೆಟ್ ಬೇಡ ಎಂದು ನಾನೇ ತಿಳಿಸಿದ್ದೇನೆ. ಹೀಗಾಗಿ ನನ್ನ ಪುತ್ರ ಹರ್ಷ ಮೊಯ್ಲಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿಲ್ಲ. ಬದಲಿಗೆ ಪಕ್ಷ ಸೂಚಿಸಿದವರ ಪರವಾಗಿ ಕೆಲಸ ಮಾಡುತ್ತಾನೆಂದು ಹೇಳಿದ್ದಾರೆ.
ಕಾಂಗ್ರೆಕ್ ಟಿಕೆಟ್ ಹಂಚಿಕೆ ಪ್ರಕ್ರಿಯೆಯಲ್ಲಿ ಲೋಕೋಪಯೋಗಿ ಇಲಾಖೆ ಗುತ್ತಿಗೆದಾರರ ಹಣ ಕೆಲಸ ಮಾಡುತ್ತಿದೆ ಎಂಬ ತಮ್ಮ ತಂದೆಯ ಟ್ವೀಟನ್ನು ರೀಟ್ವೀಟ್ ಮಾಡಿ ಪಕ್ಷಗ ಕೆಂಗಣ್ಣಿಗೆ ಹರ್ಷ ಮೊಯ್ಲಿ ತುತ್ತಾಗಿದ್ದುರು.
ಈ ಟ್ವೀಟ್ ಕಾಂಗ್ರೆಸ್'ಗೆ ತೀವ್ರ ಮುಜುಗರ ಉಂಟು ಮಾಡಿದ್ದ ಹಿನ್ನಲೆಯಲ್ಲಿ ಕಾರಣ ಕೇಳಿ ಶೋಕಾಸ್ ನೋಟಿಸ್ಸನ್ನೂ ಜಾರಿಗೊಳಿಸಿತ್ತು. ಇದೀಗ ನಿನ್ನೆ ನಡೆದ ಸಭೆಯಲ್ಲಿ ತಮ್ಮ ಪುತ್ರನಿಗೆ ಕಾರ್ಕಳ ಕ್ಷೇತ್ರದ ಟಿಕೆಟ್ ಬೇಡ ಎಂದು ಸ್ವತಃ ನಾನೇ ಹೇಳಿದ್ದೇನೆಂದು ಸ್ಪಷ್ಟಪಡಿಸಿದ್ದಾರೆ.