ಬಿಜೆಪಿ ಸೋಲಿಸಲು ಜೆಡಿಎಸ್ ಜತೆ ಮೈತ್ರಿ ಮಾಡಿಕೊಳ್ಳಿ: ಸಿಎಂಗೆ ಪ್ರಗತಿಪರರ ಮನವಿ

ವಿಧಾನಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್ ಚುನಾವಣಾ....
ಸಿದ್ದರಾಮಯ್ಯ
ಸಿದ್ದರಾಮಯ್ಯ
Updated on: 
ಬೆಂಗಳೂರು: ವಿಧಾನಸಭೆ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್‌ ಮತ್ತು ಜೆಡಿಎಸ್ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕು ಎಂದು ಪ್ರಗತಿಪರ ಸಂಘಟನೆಗಳ ಮುಖಂಡರು ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ. ನ್ನು ಭೇಟಿಯಾಗಿ ಕೆಲ ಕಾಲ ಮಾತುಕತೆ ನಡೆಸಿದರು. 
ಇಂದು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಇಂದುಧರ ಹೊನ್ನಾಪುರ, ಹಿರಿಯ ಚಿಂತಕ ಎ ಕೆ ಸುಬ್ಬಯ್ಯ ,ಕೋಮು ಸೌಹಾರ್ದ ವೇದಿಕೆಯ ಕೆ.ಎಲ್‌.ಅಶೋಕ್‌ ನೇತೃತ್ವದ ಪ್ರಗತಿಪರರ ನಿಯೋಗ,   ಮುಂದಿನ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕೋಮುವಾದಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಬಾರದು. ಹೀಗಾಗಿ ರಾಜ್ಯದಲ್ಲಿ ಜೆಡಿಎಸ್‌ ಮತ್ತು ಕಾಂಗ್ರೆಸ್‌ ಚುನಾವಣಾ ಪೂರ್ವ ಮೈತ್ರಿ ಮಾಡಿಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ. 
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿದ, ಕೆಪಿಸಿಸಿ ಕಾರ್ಯಾಧ್ಯಕ್ಷ  ದಿನೇಶ್‌ ಗುಂಡುರಾವ್‌ ಅವರು, ರಾಜ್ಯದಲ್ಲಿ ಜೆಡಿಎಸ್‌ನೊಂದಿಗೆ ಮೈತ್ರಿ ಪ್ರಶ್ನೆ ಇಲ್ಲ. ಕಾಂಗ್ರೆಸ್‌ ಸಶಕ್ತವಾಗಿದ್ದು 224 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ. ಮೈತ್ರಿ ಮಾಡಿಕೊಳ್ಳಲು ಪ್ರಗತಿಪರರು ಹೇಳಿಲ್ಲ, ಒಟ್ಟಾಗಿ ಹೋಗಲು ಹೇಳಿದ್ದಾರಷ್ಟೇ ಎಂದರು.
ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್‌ ಅವರೂ ಮೈತ್ರಿ ಮಾತನ್ನು ತಳ್ಳಿ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com