ರಾಜಕೀಯ

ನಾನು ತಪ್ಪು ಮಾಡಿರಬಹುದು, ಆದರೆ, ರಾಜ್ಯದ ಜನ ತಪ್ಪು ಮಾಡಲ್ಲ: ಅಮಿತ್ ಶಾ

ನಾನು ತಪ್ಪು ಮಾಡಿರಬಹುದು, ಆದರೆ, ರಾಜ್ಯದ ಜನ ತಪ್ಪು ಮಾಡಲ್ಲ: ಅಮಿತ್ ಶಾ
ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ
Published On :
ಮೈಸೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಕುರಿತಂತೆ ನೀಡಿದ್ದ ಹೇಳಿಕೆಗೆ ಸ್ಪಷ್ಟನೆ ನೀಡಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು, ಬಾಯಿ ತಪ್ಪಿ ಸಿದ್ದರಾಮಯ್ಯ ಬದಲು ಬಿ.ಎಸ್.ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ ಎಂದು ಶುಕ್ರವಾರ ಹೇಳಿದ್ದಾರೆ. 
ಈ ಕುರಿತಂತೆ ಮೈಸೂರಿನಲ್ಲಿ ಮಾತನಾಡಿರುವ ಅವರು, ಬಾಯಿ ತಪ್ಪಿ ಸಿದ್ದರಾಮಯ್ಯ ಬದಲಿಗೆ ಯಡಿಯೂರಪ್ಪ ಅವರದ್ದು ಭ್ರಷ್ಟ ಸರ್ಕಾರ ಎಂದು ಹೇಳಿದ್ದೆ. ಇಷ್ಟಕ್ಕೆ ಕಾಂಗ್ರೆಸ್ ಪಕ್ಷ ಅತೀವ ಸಂತಸಪಟ್ಟಿತ್ತು. ರಾಹುಲ್ ಗಾಂಧಿಯವರಿಗೆ ಒಂದನ್ನು ಹೇಳಲು ಇಚ್ಛಿಸುತ್ತೇನೆ, ನಾನು ತಪ್ಪು ಮಾಡಿರಬಹುದು. ಆದರೆ, ಕರ್ನಾಟಕದ ಜನತೆ ತಪ್ಪು ಮಾಡುವುದಿಲ್ಲ ಎಂದು ಹೇಳಿದ್ದಾರೆ. 
ಇದೇ ವೇಳೆ ಬಿಜೆಪಿ ಹಾಗೂ ಆರ್'ಎಸ್ಎಸ್ ಕಾರ್ಯಕರ್ತರ ಹತ್ಯೆ ಕುರಿತಂತೆ ಮಾತನಾಡಿರುವ ಅವರು, ಹತ್ಯೆಯನ್ನು ತೀವ್ರವಾಗಿ ಖಂಡಿಸುತ್ತೇನೆ. 24ಕ್ಕೂ ಹೆಚ್ಚು ಕಾರ್ಯಕರ್ತರು ಹತ್ಯೆಗೀಡಾಗಿದ್ದಾರೆ. ಆದರೆ, ಪೊಲೀಸರು ಈ ವರೆಗೂ ಹಂತಕರ ವಿರುದ್ಧ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ. ಹಂತಕರು ಸ್ವತಂತ್ರವಾಗಿ ಓಡಾಡಿಕೊಂಡಿದ್ದಾರೆ. ಸಿದ್ದರಾಮಯ್ಯ ಸರ್ಕಾರ ಅಂತ್ಯಗೊಳ್ಳುವ ಕಾಲ ಸನಿಹಬಂದಿದೆ. ಬಿಜೆಪಿ ಅಧಿಕಾರಕ್ಕೆ ಬರುತ್ತಿದ್ದಂತೆಯೇ ನ್ಯಾಯವನ್ನು ಒದಗಿಸಲಾಗುತ್ತದೆ ಎಂದು ತಿಳಿಸಿದ್ದಾರೆ. 
ಕೆಲ ದಿನಗಳ ಹಿಂದಷ್ಟೇ ದಾವಣಗೆರೆಯಲ್ಲಿ ಮಾತನಾಡಿದ್ದ ಅಮಿತ್ ಶಾ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಟೀಕಿಸುವ ಭರದಲ್ಲಿ ಯಡಿಯೂರಪ್ಪ ಅತ್ಯಂತ ಭ್ರಷ್ಟ ಎಂದು ಹೇಳಿದ್ದರು. 
ಯಡಿಯೂರಪ್ಪ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ ಎಂದು ಇತ್ತೀಚೆಗಷ್ಟೇ ನಿವೃತ್ತರಾಗಿರುವ ಸುಪ್ರೀಂಕೋರ್ಟ್ ನ್ಯಾಯಾಧೀಶರು ಹೇಳಿದ್ದರು ಎಂದು ಅಮಿತ್ ಶಾ ಹೇಳಿದ್ದರು. 
ಈ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಅಂತಿಮವಾಗಿ ಅಮಿತ್ ಶಾ ಸತ್ಯ ಒಪ್ಪಿಕೊಂಡಿದ್ದಾರೆಂದು ಲೇವಡಿ ಮಾಡಿದ್ದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.