ಮೈಸೂರು: ಹಾಲಿ-ಮಾಜಿ ಸಿಎಂ ಪುತ್ರರ ಕದನಕ್ಕೆ ಸಾಕ್ಷಿಯಾಗಲಿದ್ಯಾ ವರುಣಾ ವಿಧಾನಸಭಾ ಕ್ಷೇತ್ರ?!

ಯತೀಂದ್ರ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ...
ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ
ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ
Updated on
ಬೆಂಗಳೂರು: ತಮ್ಮ ಪುತ್ರ ಯತೀಂದ್ರನಿಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಡಲು ನಿರ್ದರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. 
ಈಗಾಗಲೇ ಕ್ಷೇತ್ರದಲ್ಲೆಡೆ ಅಭ್ಯರ್ಥಿ ಎಂದು ಘೋಷಣೆಯಾಗುವುದಕ್ಕೂ ಮುನ್ನವೇ ಸ್ವಘೋಷಿತವಾಗಿಯೇ ಯತೀಂದ್ರ ಸಿದ್ದರಾಮಯ್ಯ ಭರ್ಜರಿ ಪ್ರಚಾರ  ಕೂಡ ನಡೆಸುತ್ತಿದ್ದಾರೆ. 
ಯತೀಂದ್ರ ವಿರುದ್ಧ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಅವರ ಎರಡನೇ ಪುತ್ರ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಮಾಸ್ಟರ್ ಪ್ಲಾನ್ ರೂಪಿಸುತ್ತಿದೆ. ಹಾಲಿ ಹಾಗೂ ಮಾಜಿ ಸಿಎಂ ಪುತ್ರರ ಸ್ಪರ್ದೆಯಿಂದಾಗಿ ವರುಣಾ ಕ್ಷೇತ್ರದಲ್ಲಿ ಜಿದ್ದಾಜಿದ್ದಿನ ಸಮರ ನಡೆಯಲಿದೆ.
ಸಿದ್ದರಾಮಯ್ಯ ಅವರು ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ, ವರುಣಾ ಕ್ಷೇತ್ರದಲ್ಲಿ ಡಾ. ಯತೀಂದ್ರ ವಿರುದ್ಧ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಉದ್ದೇಶದಿಂದ ವಿಜಯೇಂದ್ರ ಅವರ ಹೆಸರನ್ನು ಸೂಚಿಸಲಾಗಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಆದರೆ ಈ ಸಂಬಂಧ ಪ್ರತಿಕ್ರಿಯೆ ನೀಡಲು ಬಿಜೆಪಿ ನಾಯಕರು ನಿರಾಕರಿಸಿದ್ದಾರೆ,ಯತೀಂದ್ರ ವಿರುದ್ಧ  ಕಣಕ್ಕಿಳಿಸಲು ಪಕ್ಷದ ಕಾರ್ಯಕರ್ತರು ಹಾಗೂ ಪ್ರಮುಖ ಮುಖಂಡರು ವಿಜಯೇಂದ್ ಅವರ ಮನವೊಲಿಸುತ್ತಿದ್ದಾರೆ ಎಂದು ಬಿಜೆಪಿ ರೈತ ಮೊರ್ಚಾ ಪ್ರಧಾನ ಕಾರ್ಯದರ್ಶಿ  ಕಾಪು ಸಿದ್ದಲಿಂಗ ಸ್ವಾಮಿ ತಿಳಿಸಿದ್ದಾರೆ. 
ಸಿದ್ದರಾಮಯ್ಯ  ಅವರ ಪುತ್ರನನ್ನು ಸೋಲಿಸಲು ನಮಗೆ ಪ್ರಬಲ ಅಭ್ಯರ್ಥಿ ಬೈಕಾಗಿದೆ,  ಹೀಗಾಗಿ ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಪ್ರಯತ್ನಿಸಲಾಗುತ್ತಿದೆ. ಯತೀಂದ್ರ ಅವರನ್ನು ಸೋಲಿಸುವುದು ದೊಡ್ಡ ಕೆಲಸವಲ್ಲ, ಆದರೆ ನಮಗೆ ಸಿದ್ದರಾಮಯ್ಯ ಅವರು ಸೋಲುವುದು ಬೇಕು ಎಂದು ಬಿಜೆಪಿ ಮುಖಂಡರೊಬ್ಬರು ತಿಳಿಸಿದ್ದಾರೆ.
ಕ್ಷೇತ್ರದಲ್ಲಿರುವ ಸಾದ್ಯಾಸಾಧ್ಯತೆಗಳ ಬಗ್ಗೆ ಮುಖಂಡರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ, ಮುಂದಿನದನ್ನು ಮುಖಂಡರು ನಿರ್ಧರಿಸುತ್ತಾರೆ ಎಂದು ಕಾಪು ಸಿದ್ದಲಿಂಗ ಸ್ವಾಮಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com